AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ

Suryakumar Yadav Breaks Rohit's Record: 2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. ಪಾಕಿಸ್ತಾನದ ವಿರುದ್ಧದ ಗೆಲುವಿನೊಂದಿಗೆ ಸೂರ್ಯಕುಮಾರ್ ತಮ್ಮ ಮೊದಲ 46 T20 ಪಂದ್ಯಗಳಲ್ಲಿ 37 ಗೆಲುವುಗಳನ್ನು ಸಾಧಿಸಿ, ರೋಹಿತ್ ಶರ್ಮಾ ಅವರ ನಾಯಕತ್ವದ ದಾಖಲೆಯನ್ನು ಮುರಿದು ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿದ್ದಾರೆ.

ಪೃಥ್ವಿಶಂಕರ
|

Updated on: Feb 16, 2026 | 7:59 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಆತಿಥೇಯ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ 2024 ರ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನಾಯಕತ್ವವಹಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ತಮ್ಮ ನಾಯಕತ್ವದಲ್ಲಿ ತಂಡವನ್ನು ಸತತ ಗೆಲುವಿನತ್ತ ಕೊಂಡೊಯ್ದಿದ್ದಾರೆ.

1 / 5
ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ  ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ.

2 / 5
ಪಾಕಿಸ್ತಾನ ವಿರುದ್ಧ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಸೂರ್ಯಕುಮಾರ್ ಯಾದವ್ ನಾಯಕನಾಗಿ 37ನೇ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ವಾಸ್ತವವಾಗಿ ಸೂರ್ಯಕುಮಾರ್ ಯಾದವ್  ತಮ್ಮ ಮೊದಲ 46 ಟಿ20ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

3 / 5
ಸೂರ್ಯಕುಮಾರ್ ಯಾದವ್ ಇದುವರೆಗೆ 46 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ ತಂಡವನ್ನು 37 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ. ಉಳಿದಂತೆ ಏಳರಲ್ಲಿ ಸೋಲು ಮತ್ತು ಎರಡು ಪಂದ್ಯಗಳು ಡ್ರಾಗೊಂಡಿವೆ.

4 / 5
ಈ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಮೊದಲ 46 ಪಂದ್ಯಗಳಲ್ಲಿ 36 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರೆ, ಹತ್ತು ಪಂದ್ಯಗಳಲ್ಲಿ ಸೋಲುಕಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ 46 ಪಂದ್ಯಗಳಲ್ಲಿ 29 ಪಂದ್ಯಗಳಲ್ಲಿ ಗೆಲುವು ಮತ್ತು 15 ಪಂದ್ಯಗಳಲ್ಲಿ ಸೋಲು ಕಂಡಿದ್ದರು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ