ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್
India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 225 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಪಡೆ 46 ರನ್ಗಳ ವಿಜಯ ಸಾಧಿಸಿದೆ.
Updated on: Feb 01, 2026 | 8:11 AM

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಅಭಿಷೇಕ್ ಶರ್ಮಾ ಔಟಾದ ಬಳಿಕ ಕ್ರೀಸ್ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಈ ಬಿರುಸಿನ ಬ್ಯಾಟಿಂಗ್ನೊಂದಿಗೆ ಕೇವಲ 30 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 63 ರನ್ ಬಾರಿಸಿದ್ದರು.

ಈ 63 ರನ್ಗಳೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 3000 ರನ್ ಪೂರೈಸಿದ್ದಾರೆ. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮುಹಮ್ಮದ್ ವಸೀಮ್ ಹೆಸರಿನಲ್ಲಿತ್ತು.

ಯುಎಇ ತಂಡದ ಆರಂಭಿಕ ದಾಂಡಿಗ ಮುಹಮ್ಮದ್ ವಸೀಮ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೇವಲ 1947 ಎಸೆತಗಳಲ್ಲಿ 3000 ರನ್ ಪೂರೈಸಿದ್ದರು. ಈ ಮೂಲಕ 2 ಸಾವಿರಕ್ಕಿಂತ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೂರ್ಯಕುಮಾರ್ 3000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 1822 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ಗಳ ಗಡಿದಾಟಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



