ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್

Updated on: Feb 01, 2026 | 8:11 AM

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 225 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಪಡೆ 46 ರನ್​ಗಳ ವಿಜಯ ಸಾಧಿಸಿದೆ.

1 / 5
ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

2 / 5
ಅಭಿಷೇಕ್ ಶರ್ಮಾ ಔಟಾದ ಬಳಿಕ ಕ್ರೀಸ್​ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಕೇವಲ 30 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದರು.

3 / 5
ಈ 63 ರನ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3000 ರನ್ ಪೂರೈಸಿದ್ದಾರೆ. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮುಹಮ್ಮದ್ ವಸೀಮ್ ಹೆಸರಿನಲ್ಲಿತ್ತು.

4 / 5
ಯುಎಇ ತಂಡದ ಆರಂಭಿಕ ದಾಂಡಿಗ ಮುಹಮ್ಮದ್ ವಸೀಮ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೇವಲ 1947 ಎಸೆತಗಳಲ್ಲಿ 3000 ರನ್ ಪೂರೈಸಿದ್ದರು. ಈ ಮೂಲಕ 2 ಸಾವಿರಕ್ಕಿಂತ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

5 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೂರ್ಯಕುಮಾರ್ 3000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 1822 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್​ಗಳ ಗಡಿದಾಟಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.