- Kannada News Photo gallery Cricket photos Suryakumar Yadav Creates New World Record in T20Is Kannada News zp
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Suryakumar Yadav: ಕೇವಲ 45 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ 2ನೇ ವೇಗದ ಶತಕದ ಸರದಾರ ಎನಿಸಿಕೊಂಡಿರುವುದು ವಿಶೇಷ.
Updated on: Jan 07, 2023 | 11:58 PM

ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ರಾಜ್ಕೋಟ್ನಲ್ಲಿ ನಡೆದ ಈ ಪಂದ್ಯದಲ್ಲಿ ಸೂರ್ಯ 45 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. ಇದರೊಂದಿಗೆ ಟೀಮ್ ಇಂಡಿಯಾ ಪರ ವೇಗವಾಗಿ ಟಿ20 ಶತಕ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೆಎಲ್ಆರ್ 46 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಕೇವಲ 45 ಎಸೆತಗಳಲ್ಲಿ ಸೆಂಚುರಿ ಸಿಡಿಸಿರುವ ಸೂರ್ಯ ಟಿ20 ಕ್ರಿಕೆಟ್ನಲ್ಲಿ ವೇಗವಾಗಿ ಶತಕ ಬಾರಿಸಿರುವ ಭಾರತೀಯರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಅಷ್ಟೇ ಅಲ್ಲದೆ 51 ಎಸೆತಗಳಲ್ಲಿ ಅಜೇಯ 112 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ 1500 ರನ್ ಪೂರೈಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದಿಗೆ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳನ್ನು ಎದುರಿಸಿ 1500 ರನ್ ಪೂರೈಸಿದ ವಿಶ್ವ ದಾಖಲೆ ಇದೀಗ ಸೂರ್ಯಕುಮಾರ್ ಪಾಲಾಗಿದೆ. ಸೂರ್ಯ ಕೇವಲ 843 ಎಸೆತಗಳಲ್ಲಿ 1500 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನ ವೇಗದ ರನ್ ಸರದಾರ ಎನಿಸಿಕೊಂಡಿದ್ದಾರೆ.

ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

ಇದೀಗ ಕೇವಲ 45 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ 2ನೇ ವೇಗದ ಶತಕದ ಸರದಾರ ಎನಿಸಿಕೊಂಡಿದ್ದಾರೆ.

ಇದಲ್ಲದೆ, 2023 ರಲ್ಲಿ ಟೀಮ್ ಇಂಡಿಯಾ ಪರ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗೆಯೇ ಇದು ಭಾರತದಲ್ಲಿ ಸೂರ್ಯಕುಮಾರ್ ಯಾದವ್ ಬಾರಿಸಿದ ಮೊದಲ ಶತಕ ಕೂಡ ಎಂಬುದು ವಿಶೇಷ.



















