AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನ ವಿಶ್ವ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

Suryakumar Yadav Record: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡದ ಉಪನಾಯಕ ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ 25 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿದರೆ ಸೂರ್ಯನ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ.

ಝಾಹಿರ್ ಯೂಸುಫ್
|

Updated on: May 22, 2025 | 1:55 PM

Share
ಮುಂಬೈ ಇಂಡಿಯನ್ಸ್ (Mumbai Indians) ತಂಡದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್​​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸೌತ್ ಆಫ್ರಿಕಾದ ಟೆಂಬಾ ಬವುಮಾ ಅವರ ವರ್ಲ್ಡ್​​ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 63ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 73 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಪರೂಪದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಬಾರಿ 25+ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನಕ್ಕೇರಿದ್ದಾರೆ. ಸೂರ್ಯ ಕಳೆದ 13 ಇನಿಂಗ್ಸ್​ಗಳಲ್ಲಿ ಕ್ರಮವಾಗಿ 73, 35, 48, 54, 40, 68, 26, 40, 28, 67, 27, 48 ಹಾಗೂ 29 ರನ್​ಗಳನ್ನು ಬಾರಿಸಿದ್ದಾರೆ.  ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 13 ಬಾರಿ 25+ ರನ್​ಗಳಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಸೌತ್ ಆಫ್ರಿಕಾ ಟೆಂಬಾ ಬವುಮಾ. 2019-20 ರಲ್ಲಿ ಬವುಮಾ ಸತತ 13 ಇನಿಂಗ್ಸ್​ಗಳಲ್ಲಿ 25+ ಸ್ಕೋರ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ.

4 / 5
ಅಲ್ಲದೆ ಮೇ 26 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಕ್ಕಿಂತ ಹೆಚ್ಚಿನ ರನ್​ಗಳಿಸಿದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಸತತ 14 ಇನಿಂಗ್ಸ್​ನಲ್ಲಿ 25+ ಸ್ಕೋರ್​ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲು ಸೂರ್ಯಕುಮಾರ್ ಯಾದವ್​ ಮುಂದಿನ ಪಂದ್ಯದಲ್ಲಿ ಇಪ್ಪತ್ತೈದಕ್ಕಿಂತ ಹೆಚ್ಚಿನ ರನ್ ಗಳಿಸಿದರೆ ಸಾಕು.

5 / 5