Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

India vs South Africa: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (56) ಹಾಗೂ ರಿಂಕು ಸಿಂಗ್ (68) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರು ಆಟಗಾರರ ಉತ್ತಮ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 12, 2023 | 10:16 PM

ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶೇಷ ರೆಕಾರ್ಡ್​ ಅನ್ನು ಸರಿಗಟ್ಟಿದ್ದಾರೆ.

1 / 6
ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಚುಟುಕು ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಪೂರೈಸಿದ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

2 / 6
ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿತ್ತು. ವಿರಾಟ್ ಕೊಹ್ಲಿ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಕಲೆಹಾಕಿದ ಕಿಂಗ್ ಕೊಹ್ಲಿ ದಾಖಲೆಯನ್ನು ಸೂರ್ಯಕುಮಾರ್ ಸರಿಗಟ್ಟಿದ್ದಾರೆ.

4 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 2000 ರನ್ ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿ. ಬಾಬರ್ ಹಾಗೂ ರಿಝ್ವಾನ್ ಕೇವಲ 52 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 2 ಸಾವಿರ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (56) ಹಾಗೂ ರಿಂಕು ಸಿಂಗ್ (68) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರು ಆಟಗಾರರ ಉತ್ತಮ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180  ರನ್​ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

6 / 6

Published On - 10:14 pm, Tue, 12 December 23

Follow us
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ

ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು

ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್

ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್

VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ