- Kannada News Photo gallery Cricket photos Suryakumar Yadav, First player to get dismissed for golden ducks in every match
Suryakumar Yadav: ಡಕ್ ಗೋಲ್ಡನ್ ಡಕ್…ಅನಗತ್ಯ ದಾಖಲೆ ಬರೆದ ಸೂರ್ಯ..!
Suryakumar Yadav: ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಔಟಾಗಿದ್ದರು.
Updated on: Mar 22, 2023 | 11:08 PM

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೂರ್ಯಕುಮಾರ್ ಯಾದವ್ ಗೋಲ್ಡರ್ ಡಕ್ಗೆ ಔಟಾಗಿದ್ದಾರೆ. ಈ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯ ಅಷ್ಟನ್ ಅಗರ್ ಅವರ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು.

ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಸತತ ಮೂರು ಬಾರಿ ಗೋಲ್ಡನ್ ಡಕ್ಗೆ ಔಟಾದ ಮೊದಲ ಬ್ಯಾಟರ್ ಎಂಬ ಬೇಡದ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಅವರು ಆಸ್ಟ್ರೇಲಿಯಾ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಔಟಾಗಿದ್ದರು. ಇನ್ನು ವಿಶಾಖಪಟ್ಟಣದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ವಿಶೇಷ ಎಂದರೆ ಹೀಗೆ ಮೊದಲೆರಡು ಬಾರಿ ಸೂರ್ಯನನ್ನು ಶೂನ್ಯಕ್ಕೆ ಔಟ್ ಮಾಡಿದ್ದು ಮಿಚೆಲ್ ಸ್ಟಾರ್ಕ್.

ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಸ್ಪಿನ್ನರ್ ಅಷ್ಟನ್ ಅಗರ್ ಎಸೆದ ಮೊದಲ ಎಸೆತದಲ್ಲೇ ಸೂರ್ಯಕುಮಾರ್ ಕ್ಲೀನ್ ಬೌಲ್ಡ್ ಆಗಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್ನ ಸತತವಾಗಿ ಮೂರು ಪಂದ್ಯಗಳಲ್ಲಿ ಮೊದಲ ಎಸೆತದಲ್ಲೇ ಔಟಾದ ಮೊದಲ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಪಾಲಾಗಿದೆ.

ಒಂದೆಡೆ ಕಳಪೆ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದರೂ ಸೂರ್ಯಕುಮಾರ್ಗೆ ಸತತ ಅವಕಾಶ ನೀಡಲಾಗುತ್ತಿರುವುದು ಕೂಡ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಏಕದಿನ ಕ್ರಿಕೆಟ್ನಲ್ಲಿ 21 ಇನಿಂಗ್ಸ್ ಆಡಿದರೂ ಸೂರ್ಯಕುಮಾರ್ ಯಾದವ್ 25.47 ಸರಾಸರಿಯಲ್ಲಿ ಕೇವಲ 433 ರನ್ ಕಲೆಹಾಕಿದ್ದಾರೆ.

ಮತ್ತೊಂದೆಡೆ 10 ಏಕದಿನ ಇನಿಂಗ್ಸ್ನಲ್ಲಿ 66 ಸರಸಾರಿಯಲ್ಲಿ 330 ರನ್ ಪೇರಿಸಿರುವ ಸಂಜು ಸ್ಯಾಮ್ಸನ್ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸುತ್ತಿಲ್ಲ ಎಂಬುದೇ ಅಚ್ಚರಿ.
