- Kannada News Photo gallery Cricket photos Suryakumar Yadav has been ruled out of ipl 2022 due to left forearm strain mumbai indians
IPL 2022: ಮುಂಬೈ ಇಂಡಿಯನ್ಸ್ಗೆ ಆಘಾತ: ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಔಟ್
Suryakumar Yadav: ಸದ್ಯ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಏಕೆಂದರೆ ಐಪಿಎಲ್ ನಂತರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ.
Updated on: May 09, 2022 | 7:29 PM

ಐಪಿಎಲ್ 2022 ರಲ್ಲಿ ಮೊದಲ 8 ಪಂದ್ಯಗಳಲ್ಲಿ ಸೋತ ನಂತರ, ಮುಂಬೈ ಇಂಡಿಯನ್ಸ್ ತಂಡವು ಎರಡು ಪಂದ್ಯಗಳನ್ನು ಗೆದ್ದಿದೆ. ಆದರೆ ಈಗ ಈ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಮುಂಬೈ ಇಂಡಿಯನ್ಸ್‌ನ ಮ್ಯಾಚ್ ವಿನ್ನಿಂಗ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯಗಳಿಗೆ ಸೂರ್ಯಕುಮಾರ್ ಯಾದವ್ ಅಲಭ್ಯರಾಗಲಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ. ಈ ಕುರಿತು ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್, 'ಸೂರ್ಯಕುಮಾರ್ ಯಾದವ್ ಎಡಗೈಗೆ ಗಾಯವಾಗಿದ್ದು, ಹೀಗಾಗಿ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡದೊಂದಿಗೆ ಮಾತುಕತೆ ನಡೆಸಿದ ನಂತರವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಂಬೈ ಇಂಡಿಯನ್ಸ್ ತಿಳಿಸಿದೆ.

ಈ ಬಾರಿಯ ಐಪಿಎಲ್ಗೂ ಮುನ್ನ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಅವರ ಅನುಪಸ್ಥಿತಿಯಿಂದ ಮುಂಬೈ ಇಂಡಿಯನ್ಸ್ ತಂಡ ಪ್ರದರ್ಶನ ಮೇಲೆ ಪರಿಣಾಮ ಬೀರಿತ್ತು. ಆ ಬಳಿಕ ತಂಡಕ್ಕೆ ಮರಳಿದ್ದ ಸೂರ್ಯಕುಮಾರ್ 8 ಪಂದ್ಯಗಳಲ್ಲಿ 3 ಅರ್ಧ ಶತಕಗಳನ್ನು ಒಳಗೊಂಡಂತೆ 43 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ 303 ರನ್ ಗಳಿಸಿ ಮಿಂಚಿದ್ದರು. ಇದೀಗ ಮತ್ತೆ ಗಾಯಗೊಂಡು ಹೊರನಡೆದಿದ್ದಾರೆ.

ಸದ್ಯ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಏಕೆಂದರೆ ಐಪಿಎಲ್ ನಂತರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಅನೇಕ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಈ ವೇಳೆ ತಂಡದಲ್ಲಿ ಸೂರ್ಯಕುಮಾರ್ ಅವರ ಉಪಸ್ಥಿತಿಯು ಬಹಳ ಮುಖ್ಯವಾಗಿರುತ್ತದೆ. ಹಾಗಾಗಿ ಐಪಿಎಲ್ನ ಮುಂದಿನ ಪಂದ್ಯಗಳಿಂದ ಹೊರಗುಳಿಯುವ ಮೂಲಕ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.




