- Kannada News Photo gallery Cricket photos Suryakumar Yadav has left behind the former African batter AB de Villiers Kannada News zp
Suryakumar Yadav: ಎಬಿಡಿಯನ್ನೇ ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್
Suryakumar Yadav: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 13 ಎಸೆತಗಳಲ್ಲಿ 24 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ವಿಶೇಷ ಸಾಧನೆ ಮಾಡಿದ್ದಾರೆ.
Updated on: Feb 02, 2023 | 9:23 PM

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 13 ಎಸೆತಗಳಲ್ಲಿ 24 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಅನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಹೌದು, ನ್ಯೂಜಿಲೆಂಡ್ ವಿರುದ್ಧ 24 ರನ್ಗಳಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ್ದಾರೆ. ಈ ಮೂಲಕ ಟಿ20 ರನ್ ಸರದಾರರ ಪಟ್ಟಿಯಲ್ಲಿ ಎಬಿಡಿಯನ್ನು ಹಿಂದಿಕ್ಕಿದ್ದಾರೆ.

ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಟಿ20 ಕ್ರಿಕೆಟ್ನಲ್ಲಿ 75 ಇನಿಂಗ್ಸ್ ಮೂಲಕ 10 ಅರ್ಧಶತಕಗಳೊಂದಿಗೆ ಒಟ್ಟು 1672 ರನ್ ಕಲೆಹಾಕಿದ್ದಾರೆ. ಇದೀಗ ಟಿ20 ರನ್ಗಳಿಕೆಯ ವಿಷಯದಲ್ಲಿ ಎಬಿಡಿಯನ್ನು ಸೂರ್ಯಕುಮಾರ್ ಹಿಂದಿಕ್ಕಿರುವುದು ವಿಶೇಷ.

ಸೂರ್ಯಕುಮಾರ್ ಯಾದವ್ ಕೇವಲ 46 ಟಿ20 ಇನಿಂಗ್ಸ್ ಮೂಲಕ ಒಟ್ಟು 1675 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಶತಕ ಹಾಗೂ 13 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಸದ್ಯ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 107 ಟಿ20 ಇನಿಂಗ್ಸ್ ಮೂಲಕ ಒಟ್ಟು 4008 ರನ್ ಬಾರಿಸಿದ್ದಾರೆ. ಈ ವೇಳೆ 37 ಅರ್ಧಶತಕಗಳು ಹಾಗೂ 1 ಶತಕ ಕೂಡ ಮೂಡಿಬಂದಿವೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಟಿ20 ಕ್ರಿಕೆಟ್ನಲ್ಲಿ ಯಾವುದೇ ಬ್ಯಾಟ್ಸ್ಮನ್ 4000 ರನ್ ಕಲೆಹಾಕಿಲ್ಲ ಎಂಬುದೇ ವಿಶೇಷ.




