Updated on:Oct 03, 2022 | 11:55 AM
ಗುವಾಹಾಟಿಯಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಹಾಫ್ ಸೆಂಚುರಿಯೊಂದಿಗೆ ಸೂರ್ಯಕುಮಾರ್ ಯಾದವ್ ಕೆಎಲ್ ರಾಹುಲ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.
ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಅದು ಕೂಡ ಕೆಎಲ್ ರಾಹುಲ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
ಅಂದರೆ ಕೆಎಲ್ ರಾಹುಲ್ 2021 ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ ಸೌತ್ ಆಫ್ರಿಕಾ ವಿರುದ್ಧ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಫಾಸ್ಟೆಸ್ಟ್ ಫಿಫ್ಟಿ ಬಾರಿಸಿದ ಟೀಮ್ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಜೊತೆ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ವಿಶ್ವ ದಾಖಲೆಯೊಂದಿಗೆ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 2007 ರಲ್ಲಿ ಇಂಗ್ಲೆಂಡ್ ವಿರುದ್ಧ ಯುವಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ವರ್ಲ್ ರೆಕಾರ್ಡ್ ನಿರ್ಮಿಸಿದ್ದರು. ಆ ದಾಖಲೆ ಇನ್ನೂ ಕೂಡ ಹಾಗೆಯೇ ಉಳಿದಿದೆ.
ಇದೀಗ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಕೂಡ ಟೀಮ್ ಇಂಡಿಯಾ ಪರ ಟಿ20ಯಲ್ಲಿ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಯುವರಾಜ್ ಸಿಂಗ್ ನಂತರದ ಸ್ಥಾನವನ್ನು ಕೆಎಲ್ ರಾಹುಲ್ ಜೊತೆ ಸೂರ್ಯಕುಮಾರ್ ಯಾದವ್ ಹಂಚಿಕೊಂಡಿದ್ದಾರೆ.
Published On - 11:55 am, Mon, 3 October 22