Suryakumar Yadav: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೆಎಲ್ ರಾಹುಲ್ ದಾಖಲೆ ಸರಿಗಟ್ಟಿದ ಸೂರ್ಯ

Edited By:

Updated on: Oct 03, 2022 | 11:55 AM

Suryakumar Yadav: ವಿಶೇಷ ಎಂದರೆ ಈ ಹಾಫ್ ಸೆಂಚುರಿಯೊಂದಿಗೆ ಸೂರ್ಯಕುಮಾರ್ ಯಾದವ್ ಕೆಎಲ್ ರಾಹುಲ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಗುವಾಹಾಟಿಯಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಹಾಫ್ ಸೆಂಚುರಿಯೊಂದಿಗೆ ಸೂರ್ಯಕುಮಾರ್ ಯಾದವ್ ಕೆಎಲ್ ರಾಹುಲ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಗುವಾಹಾಟಿಯಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಹಾಫ್ ಸೆಂಚುರಿಯೊಂದಿಗೆ ಸೂರ್ಯಕುಮಾರ್ ಯಾದವ್ ಕೆಎಲ್ ರಾಹುಲ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 5

ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಅದು ಕೂಡ ಕೆಎಲ್ ರಾಹುಲ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 5

ಅಂದರೆ ಕೆಎಲ್ ರಾಹುಲ್ 2021 ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ ಸೌತ್ ಆಫ್ರಿಕಾ ವಿರುದ್ಧ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಫಾಸ್ಟೆಸ್ಟ್ ಫಿಫ್ಟಿ ಬಾರಿಸಿದ ಟೀಮ್ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಜೊತೆ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.

4 / 5

ಇನ್ನು ಈ ಪಟ್ಟಿಯಲ್ಲಿ ವಿಶ್ವ ದಾಖಲೆಯೊಂದಿಗೆ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 2007 ರಲ್ಲಿ ಇಂಗ್ಲೆಂಡ್ ವಿರುದ್ಧ ಯುವಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ವರ್ಲ್​ ರೆಕಾರ್ಡ್ ನಿರ್ಮಿಸಿದ್ದರು. ಆ ದಾಖಲೆ ಇನ್ನೂ ಕೂಡ ಹಾಗೆಯೇ ಉಳಿದಿದೆ.

5 / 5

ಇದೀಗ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಕೂಡ ಟೀಮ್ ಇಂಡಿಯಾ ಪರ ಟಿ20ಯಲ್ಲಿ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಯುವರಾಜ್ ಸಿಂಗ್ ನಂತರದ ಸ್ಥಾನವನ್ನು ಕೆಎಲ್ ರಾಹುಲ್ ಜೊತೆ ಸೂರ್ಯಕುಮಾರ್ ಯಾದವ್ ಹಂಚಿಕೊಂಡಿದ್ದಾರೆ.

Published On - 11:55 am, Mon, 3 October 22

Loading...
Unable to load recommendations.
Follow Us