- Kannada News Photo gallery Cricket photos Suryakumar Yadav is 68 runs away from reaching 2500 T20I runs
Suryakumar Yadav: ಒಂದು ಪಂದ್ಯ… ಸೂರ್ಯನ ಮುಂದಿದೆ ಭರ್ಜರಿ 2 ದಾಖಲೆಗಳು
India vs Bangladesh: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟಿ20 ಸರಣಿಯು ಇಂದಿನಿಂದ (ಅ.6) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗ್ವಾಲಿಯರ್ನಲ್ಲಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್ನಲ್ಲಿ ಲೈವ್ ವೀಕ್ಷಿಸಬಹುದು.
Updated on: Oct 06, 2024 | 1:53 PM

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟಿ20 ಪಂದ್ಯವು ಇಂದು (ಅಕ್ಟೋಬರ್ 6) ನಡೆಯಲಿದೆ. ಗ್ವಾಲಿಯರ್ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ 2 ಭರ್ಜರಿ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಂದಿದೆ.

ಅಂದರೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 69 ರನ್ ಬಾರಿಸಿದರೆ, ಟಿ20 ಕ್ರಿಕೆಟ್ನಲ್ಲಿ 2500+ ರನ್ಗಳಿಸಿ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಅತೀ ವೇಗವಾಗಿ ಈ 2500 ರನ್ ಗಳಿಸಿದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (68 ಇನಿಂಗ್ಸ್) ಅಗ್ರಸ್ಥಾನದಲ್ಲಿದ್ದಾರೆ.

71 ಟಿ20 ಪಂದ್ಯಗಳಲ್ಲಿ 68 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ 1442 ಎಸೆತಗಳನ್ನು ಎದುರಿಸಿ 2432 ರನ್ ಕಲೆಹಾಕಿದ್ದಾರೆ. ಇದೀಗ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ 68 ರನ್ ಗಳಿಸಿದರೆ 2500 ರನ್ ಪೂರ್ಣಗೊಳ್ಳಲಿದೆ. ಈ ಮೂಲಕ ಟೀಮ್ ಇಂಡಿಯಾ ಅತೀ ವೇಗವಾಗಿ 2500 ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಬಹುದು.

ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಸೂರ್ಯಕುಮಾರ್ ಈಗ ವಿರಾಟ್ ಕೊಹ್ಲಿಯೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

2010 ರಿಂದ 2024 ರವರೆಗೆ ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿರುವ ಕೊಹ್ಲಿ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ 71 ಟಿ20 ಪಂದ್ಯಗಳಿಂದ 16 ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವ ಸೂರ್ಯಕುಮಾರ್ ಯಾದವ್, ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.



















