Suryakumar Yadav: ಟೀಮ್ ಇಂಡಿಯಾಕ್ಕೆ ಮತ್ತೊಂದು ಟೆನ್ಶನ್: 7 ವಾರಗಳ ಕಾಲ ತಂಡದಿಂದ ನಾಯಕ ಔಟ್

Suryakumar Yadav's ankle injury: ದಕ್ಷಿಣ ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕತ್ವದ ವಹಿಸಿದ್ದ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಹಲವು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸೂರ್ಯ ಅವರ ಗಾಯವು ಸಾಕಷ್ಟು ಗಂಭೀರವಾಗಿದೆ. ಇದರಿಂದಾಗಿ ಅವರು ಕ್ರಿಕೆಟ್ ಆಕ್ಷನ್‌ನಿಂದ ಸಂಪೂರ್ಣವಾಗಿ ದೂರವಿರುತ್ತಾರೆ.

|

Updated on: Dec 23, 2023 | 7:09 AM

ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಬಳಿಕ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು. ಇದೀಗ ಟೆಸ್ಟ್ ಸರಣಿಯಲ್ಲೂ ಐತಿಹಾಸಿಕ ಗೆಲುವು ದಾಖಲಿಸಿದರೆ ಈ ಪ್ರವಾಸ ಸಂಪೂರ್ಣ ಯಶಸ್ವಿಯಾಗಲಿದೆ. ಇವೆಲ್ಲದರ ನಡುವೆ ದಕ್ಷಿಣ ಆಫ್ರಿಕಾದಿಂದ ಭಾರತ ತಂಡಕ್ಕೆ ಆತಂಕಕಾರಿ ಸುದ್ದಿಯೊಂದು ಬಂದಿದ್ದು, ದೊಡ್ಡ ಆಘಾತ ಎದುರಾಗಿದೆ.

1 / 7
ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕತ್ವದ ವಹಿಸಿದ್ದ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಹಲವು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಕಳೆದ ಟಿ20 ಪಂದ್ಯದಲ್ಲಿ ಸೂರ್ಯ ಈ ಗಾಯಕ್ಕೆ ಒಳಗಾಗಿದ್ದು, ಇದೀಗ ಮುಂದಿನ ತಿಂಗಳು ನಡೆಯಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

2 / 7
ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ವರದಿಯ ಪ್ರಕಾರ, ಸೂರ್ಯ ಅವರ ಗಾಯವು ಸಾಕಷ್ಟು ಗಂಭೀರವಾಗಿದೆ. ಇದರಿಂದಾಗಿ ಅವರು ಮುಂದಿನ ಕೆಲವು ವಾರಗಳವರೆಗೆ ಕ್ರಿಕೆಟ್ ಆಕ್ಷನ್‌ನಿಂದ ಸಂಪೂರ್ಣವಾಗಿ ದೂರವಿರುತ್ತಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸೂರ್ಯ ಅವರ ಕಾಲು ತಿರುಚಿದ ಕಾರಣ ಅವರು ಪಾದದ ಗಾಯಕ್ಕೆ ಒಳಗಾಗಿದ್ದರು.

3 / 7
ಕೊನೆಯ ಟಿ20 ಪಂದ್ಯ ಮುಗಿದ ನಂತರ, ಸೂರ್ಯ ಅವರ ಗಾಯ ದೊಡ್ಡ ಪ್ರಮಾಣದಲ್ಲಿ ಕಂಡುಬಂದಿಲ್ಲ. ಅವರ ನಡಿಗೆಯಲ್ಲಿ ಯಾವುದೇ ಸಮಸ್ಯೆ ಎದುರಿಸಿರಲಿಲ್ಲ. ಆದರೆ, ಇದೀಗ ದೇಶಕ್ಕೆ ಮರಳಿ ಪಾದದ ಸ್ಕ್ಯಾನ್ ಮಾಡಲಾಗಿದ್ದು, ಅವರು ತಕ್ಷಣವೇ ಕ್ರಿಕೆಟ್​ಗೆ ಮರಳಲು ಸಾಧ್ಯವಿಲ್ಲ ಮತ್ತು ಸದ್ಯಕ್ಕೆ ವಿಶ್ರಾಂತಿ ಪಡೆಯಬೇಕಾಗಿದೆ ಎಂದು ಹೇಳಲಾಗಿದೆ.

4 / 7
ಸೂರ್ಯಕುಮಾರ್ ಸುಮಾರು 7 ವಾರಗಳ ಕಾಲ ಕ್ರಿಕೆಟ್ ಆಕ್ಷನ್‌ನಿಂದ ದೂರವಿರುತ್ತಾರೆ. ಹೀಗಾಗಿ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಉಳಿಯುವ ಮೂಲಕ ಪುನರ್ವಸತಿಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

5 / 7
ಸೂರ್ಯ ಔಟಾದರೆ, ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮುಂದೆ ದೊಡ್ಡ ಪ್ರಶ್ನೆಯಿರುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ನಾಯಕ ಯಾರು ಎಂಬುದು?. ಕಳೆದ ಒಂದು ವರ್ಷದಿಂದ ಈ ಮಾದರಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡು ಕ್ರಿಕೆಟ್​ನಿಂದ ಹೊರಗುಳಿದಿದ್ದಾರೆ.

6 / 7
ಹೀಗಿರುವಾಗ ಬಿಸಿಸಿಐ ಬೇರೆಯವರಿಗೆ ನಾಯಕತ್ವ ನೀಡುತ್ತಾ ಅಥವಾ ರೋಹಿತ್ ಶರ್ಮಾ ಅವರನ್ನು ಪುನಃ ಕರೆತರುತ್ತಾರ ಎಂಬುದು ನೋಡಬೇಕಿದೆ. ಇದು ಕೂಡ ಅಷ್ಟು ಸುಲಭವಲ್ಲ, ಏಕೆಂದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯು ಜನವರಿ 7 ರಂದು ಕೊನೆಗೊಳ್ಳಲಿದೆ. ಜನವರಿ 11 ರಂದು ಟಿ20 ಸರಣಿಯು ಪ್ರಾರಂಭವಾಗಲಿದೆ. ಹೀಗಿರುವಾಗ ಆಯ್ಕೆಗಾರರಿಗೂ ದೊಡ್ಡ ತಲೆನೋವು ಉಂಟಾಗಿದೆ.

7 / 7
Follow us
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ

ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್

ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್

ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ

ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು

ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ

ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ

ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ

ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!