- TV9 Kannada Kannada News Photos Cricket Photos Suryakumar Yadav Returns as Mumbai Captain for Syed Mushtaq Ali Trophy 2026
ಸೂರ್ಯಕುಮಾರ್‌ಗೆ ಮತ್ತೆ ನಾಯಕತ್ವದ ಜವಾಬ್ದಾರಿ; ತಂಡದಲ್ಲಿ ಸ್ಟಾರ್ ಆಟಗಾರರ ದಂಡು
ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ನಾಯಕನಾಗಿ 2026ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಟಿ20 ವಿಶ್ವಕಪ್ ಗೆದ್ದಿದ್ದರೂ ವೈಯಕ್ತಿಕ ಫಾರ್ಮ್ ಕಳೆದುಕೊಂಡು ರಾಷ್ಟ್ರೀಯ ತಂಡದಿಂದ ಹೊರಗುಳಿದಿದ್ದ ಸೂರ್ಯಕುಮಾರ್‌ಗೆ, ಈ ಟ್ರೋಫಿ ಮೂಲಕ ಮತ್ತೆ ತಮ್ಮ ಲಯ ಕಂಡುಕೊಂಡು ಭಾರತ ತಂಡಕ್ಕೆ ಮರಳಲು ಉತ್ತಮ ಅವಕಾಶ ದೊರೆತಿದೆ.
Updated on: Nov 09, 2026 | 9:55 PM

2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಸೂರ್ಯಕುಮಾರ್ ಯಾದವ್ ಇದೀಗ ಮತ್ತೆ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ನವೆಂಬರ್ 9ರಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2026ರ ಟೂರ್ನಿಗೆ ಮುಂಬೈ ತಂಡವನ್ನು ಪ್ರಕಟಿಸಿದ್ದು, ಸೂರ್ಯಕುಮಾರ್‌ಗೆ ನಾಯಕತ್ವ ನೀಡಿದೆ. ಈ ಮೂಲಕ ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರೆ(PC-PTI).

ಸೂರ್ಯಕುಮಾರ್ ಬಹಳ ದಿನಗಳಿಂದ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದಾರೆ. ಅವರು ಕೊನೆಯ ಬಾರಿಗೆ ಐಪಿಎಲ್ 2026ರಲ್ಲಿ ಆಡಿದ್ದರು. ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಾರ್ಚ್ 8, 2026ರಂದು ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು(PC-PTI).

2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಆದರೆ, ವೈಯಕ್ತಿಕವಾಗಿ ಕಳಪೆ ಫಾರ್ಮ್‌ನಲ್ಲಿದ್ದ ಕಾರಣ ಅವರು ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಯಿತು. ಇದೀಗ ಮುಂಬೈ ತಂಡದ ನಾಯಕತ್ವ ವಹಿಸಿಕೊಳ್ಳುವ ಮೂಲಕ ಮತ್ತೆ ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳಲು ಸೂರ್ಯಗೆ ಉತ್ತಮ ಅವಕಾಶ ಸಿಕ್ಕಿದೆ(PC-PTI).

ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಸೂರ್ಯಕುಮಾರ್, ‘ನಮ್ಮ ತಂಡದಲ್ಲಿ ಅನುಭವಿ ಆಟಗಾರರು ಮತ್ತು ಪ್ರತಿಭಾವಂತ ಯುವ ಆಟಗಾರರ ಉತ್ತಮ ಸಂಯೋಜನೆಯಿದೆ. ಎಲ್ಲರೂ ಒಟ್ಟಾಗಿ ತಂಡದ ಗೆಲುವಿಗಾಗಿ ಆಡಲಿದ್ದಾರೆ ಎಂಬ ವಿಶ್ವಾಸವಿದೆ. ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವುದು ನಮ್ಮ ಗುರಿ. ಈ ಬಾರಿ ಪ್ರಶಸ್ತಿ ಗೆದ್ದು ಮುಂಬೈಗೆ ತರುವುದು ನಮ್ಮ ಉದ್ದೇಶ’ ಎಂದು ಸೂರ್ಯ ಹೇಳಿದ್ದಾರೆ(PC-PTI).

ಸೂರ್ಯಕುಮಾರ್ ಯಾದವ್ ಜೊತೆಗೆ ಭಾರತದ ಪ್ರಮುಖ ಟಿ20 ಆಟಗಾರ ಶಿವಂ ದುಬೆ ಕೂಡ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲದೆ ಮ್ಯಾಕ್ಸ್‌ವೆಲ್ ಸ್ವಾಮಿನಾಥನ್, ಹಾರ್ದಿಕ್ ತಮೋರ್, ಅಂಗ್‌ಕ್ರಿಶ್ ರಘುವಂಶಿ, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್ ಮತ್ತು ತುಷಾರ್ ದೇಶಪಾಂಡೆ ಅವರಂತಹ ಆಟಗಾರರು ತಂಡದಲ್ಲಿದ್ದಾರೆ(PC-PTI).

ಮುಂಬೈ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಂಗ್‌ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ದಿವ್ಯಾಂಶ್ ಸಕ್ಸೇನಾ, ಸುವೇದ್ ಪರ್ಕರ್, ಮುಶೀರ್ ಖಾನ್, ಸರ್ಫರಾಜ್ ಖಾನ್, ಸಾಯಿರಾಜ್ ಪಾಟೀಲ್, ಶಿವಂ ದುಬೆ, ಅಥರ್ವ ಅಂಕೋಲೇಕರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಮ್ಯಾಕ್ಸ್‌ವೆಲ್ ಸ್ವಾಮಿನಾಥನ್, ಮೋಹಿತ್ ಅವಸ್ತಿ, ಸಿಲ್ವೆಸ್ಟರ್ ಡಿಸೋಜಾ ಮತ್ತು ಹಾರ್ದಿಕ್ ತಮೋರ್ (ವಿಕೆಟ್ ಕೀಪರ್)(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More