- TV9 Kannada Kannada News Photos Cricket Photos Suryakumar Yadav set to break Virat Kohli’s T20 record
ಸೂರ್ಯನ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಶೇಕಿಂಗ್..!
T20 Cricket Records: ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಇದ್ದು, ಅವರು ಕೂಡ 52 ಟಿ20 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್ಗಳ ಮೂಲಕ ಟಿ20 ಕ್ರಿಕೆಟ್ನಲ್ಲಿ 2 ಸಾವಿರ ರನ್ಗಳಿಸಿದ್ದರು.
Updated on: Dec 04, 2023 | 9:26 PM

ಟಿ20 ಕ್ರಿಕೆಟ್ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಸೂರ್ಯಕುಮಾರ್ ಯಾದವ್ ಇದೀಗ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶೇಷ ರೆಕಾರ್ಡ್ ಅನ್ನು ಸರಿಗಟ್ಟುವ ಸನಿಹದಲ್ಲಿದ್ದಾರೆ.

ಅಂದರೆ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ 56 ಟಿ20 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಸರಿಗಟ್ಟಲು ಸೂರ್ಯಕುಮಾರ್ ಯಾದವ್ಗೆ ಬೇಕಿರುವುದು ಕೇವಲ 15 ರನ್ಗಳು ಮಾತ್ರ. ಈಗಾಗಲೇ 55 ಟಿ20 ಇನಿಂಗ್ಸ್ಗಳಿಂದ ಸೂರ್ಯ ಒಟ್ಟು 1985 ರನ್ಗಳಿಸಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 15 ರನ್ಗಳಿಸಿದರೆ, ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ಗಳಿಸಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಬಹುದು.

ಇನ್ನು ಟಿ20 ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ 2000 ರನ್ ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹೆಸರಿನಲ್ಲಿ. ಬಾಬರ್ ಕೇವಲ 52 ಟಿ20 ಇನಿಂಗ್ಸ್ಗಳ ಮೂಲಕ ಒಟ್ಟು 2 ಸಾವಿರ ರನ್ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ 2ನೇ ಸ್ಥಾನದಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಇದ್ದು, ಅವರು ಕೂಡ 52 ಟಿ20 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್ಗಳ ಮೂಲಕ ಟಿ20 ಕ್ರಿಕೆಟ್ನಲ್ಲಿ 2 ಸಾವಿರ ರನ್ಗಳಿಸಿದ್ದರು.

TV9 Kannada
Read More



