ಸೂರ್ಯನ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಶೇಕಿಂಗ್..!

| Updated By: ಝಾಹಿರ್ ಯೂಸುಫ್

Updated on: Dec 04, 2023 | 9:26 PM

T20 Cricket Records: ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಇದ್ದು, ಅವರು ಕೂಡ 52 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳಿಸಿದ್ದರು.

1 / 6
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಸೂರ್ಯಕುಮಾರ್ ಯಾದವ್ ಇದೀಗ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶೇಷ ರೆಕಾರ್ಡ್​ ಅನ್ನು ಸರಿಗಟ್ಟುವ ಸನಿಹದಲ್ಲಿದ್ದಾರೆ.

2 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಈ ದಾಖಲೆಯನ್ನು ಸರಿಗಟ್ಟಲು ಸೂರ್ಯಕುಮಾರ್ ಯಾದವ್​ಗೆ ಬೇಕಿರುವುದು ಕೇವಲ 15 ರನ್​ಗಳು ಮಾತ್ರ. ಈಗಾಗಲೇ 55 ಟಿ20 ಇನಿಂಗ್ಸ್​ಗಳಿಂದ ಸೂರ್ಯ ಒಟ್ಟು 1985 ರನ್​ಗಳಿಸಿದ್ದಾರೆ.

4 / 6
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 15 ರನ್​ಗಳಿಸಿದರೆ, ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್​ಗಳಿಸಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಬಹುದು.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 2000 ರನ್ ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹೆಸರಿನಲ್ಲಿ. ಬಾಬರ್ ಕೇವಲ 52 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 2 ಸಾವಿರ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 6
ಹಾಗೆಯೇ 2ನೇ ಸ್ಥಾನದಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಇದ್ದು, ಅವರು ಕೂಡ 52 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳಿಸಿದ್ದರು.