AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

Suryakumar Yadav Records: ಟಿ20 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹಿರಿಮೆಗೂ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

TV9 Web
| Edited By: |

Updated on:Dec 14, 2023 | 11:35 PM

Share
ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 9
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ 12 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು.

2 / 9
ಈ ಹಂತದಲ್ಲಿ ಜೊತೆಗೂಡಿದ ಯಶಸ್ವಿ ಜೈಸ್ವಾಲ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಎಡಗೈ ದಾಂಡಿಗ ಯಶಸ್ವಿ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 60 ರನ್ ಬಾರಿಸಿ ಔಟಾದರು.

3 / 9
ಇದರ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿದರು.

4 / 9
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಬಾರಿಸಿದ ರೋಹಿತ್ ಶರ್ಮಾ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಸರಿಗಟ್ಟಿದ್ದಾರೆ. ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಬಾರಿಸಿದ್ದರು.

5 / 9
ಇದೀಗ ಸೂರ್ಯಕುಮಾರ್ ಯಾದವ್ ಕೂಡ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಸಿಡಿಸುವ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹಿರಿಮೆಗೂ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

7 / 9
ಗ್ಲೆನ್ ಮ್ಯಾಕ್ಸ್​ವೆಲ್ 92 ಇನಿಂಗ್ಸ್​ಗಳ ಮೂಲಕ 4 ಟಿ20 ಶತಕಗಳನ್ನು ಬಾರಿಸಿದ್ದರು. ಇದೀಗ ಕೇವಲ 57 ಇನಿಂಗ್ಸ್​ಗಳ ಮೂಲಕ 4 ಭರ್ಜರಿ ಸೆಂಚುರಿ ಸಿಡಿಸಿ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

8 / 9
ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಗೆಲ್ಲಲು 202 ರನ್​ಗಳ ಗುರಿ ನೀಡಿದೆ.

9 / 9

Published On - 10:08 pm, Thu, 14 December 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ