Updated on: Jan 30, 2023 | 6:29 PM
ಲಕ್ನೋನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಕೇವಲ 100 ರನ್ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾಗೆ ಅಂತಿಮ ಓವರ್ನ 5ನೇ ಎಸೆತದಲ್ಲಿ ಫೋರ್ ಬಾರಿಸಿ ಸೂರ್ಯಕುಮಾರ್ ಗೆಲುವು ತಂದುಕೊಟ್ಟಿದ್ದರು.
ಅಷ್ಟೇ ಅಲ್ಲದೆ ಅಜೇಯ 26 ರನ್ ಬಾರಿಸುವ ಮೂಲಕ ಭಾರತದ ಪರ ಟಾಪ್ ಸ್ಕೋರರ್ ಆಗಿ ಹಿಂತಿರುಗಿದ್ದರು. ಈ ಜವಾಬ್ದಾರಿಯುತ ಬ್ಯಾಟಿಂಗ್ ಮೂಲಕ ಸೂರ್ಯಕುಮಾರ್ ಟಿ20 ರನ್ ಸರದಾರರ ಪಟ್ಟಿಯಲ್ಲೂ ಮೇಲೇರಿರುವುದು ವಿಶೇಷ.
ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 47 ರನ್ ಹಾಗೂ 2ನೇ ಪಂದ್ಯದಲ್ಲಿ 26 ರನ್ ಬಾರಿಸಿದ್ದರು. ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದು ಕೂಡ ಎಂಎಸ್ ಧೋನಿ ಹಾಗೂ ಸುರೇಶ್ ರೈನಾ ಅವರನ್ನು ಹಿಂದಿಕ್ಕಿ ಮಿಸ್ಟರ್ 360 ಡಿಗ್ರಿ ಈ ಸಾಧನೆ ಮಾಡಿರುವುದು ವಿಶೇಷ.
ಭಾರತದ ಪರ 85 ಟಿ20 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ 1617 ರನ್ ಕಲೆಹಾಕಿದರೆ, ಸುರೇಶ್ ರೈನಾ 66 ಇನಿಂಗ್ಸ್ ಮೂಲಕ 1605 ರನ್ ಬಾರಿಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ 1651 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾದ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಹೀಗಿದೆ:-
1- ವಿರಾಟ್ ಕೊಹ್ಲಿ: ಭಾರತದ ಪರ 107 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 1 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 4008 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
2- ರೋಹಿತ್ ಶರ್ಮಾ: ಭಾರತ ತಂಡದ ನಾಯಕ ರೋಹಿತ್ ಶರ್ಮಾ 140 ಟಿ20 ಇನಿಂಗ್ಸ್ ಮೂಲಕ ಒಟ್ಟು 3853 ರನ್ ಕಲೆಹಾಕಿದ್ದರು. ಈ ವೇಳೆ 4 ಶತಕ ಹಾಗೂ 29 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.
3- ಕೆಎಲ್ ರಾಹುಲ್: ಟೀಮ್ ಇಂಡಿಯಾ ಪರ 68 ಟಿ20 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ 2 ಶತಕ ಹಾಗೂ 22 ಅರ್ಧಶತಕಗಳೊಂದಿಗೆ ಒಟ್ಟು 2265 ರನ್ ಕಲೆಹಾಕಿದ್ದಾರೆ.
4- ಶಿಖರ್ ಧವನ್: ಭಾರತದ ಪರ 66 ಟಿ20 ಇನಿಂಗ್ಸ್ ಆಡಿರುವ ಶಿಖರ್ ಧವನ್ 11 ಅರ್ಧಶತಕಗಳೊಂದಿಗೆ ಒಟ್ಟು 1759 ರನ್ಗಳಿಸಿದ್ದಾರೆ.
5- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಕೇವಲ 45 ಇನಿಂಗ್ಸ್ಗಳಲ್ಲಿ ಒಟ್ಟು 1651 ರನ್ ಕಲೆಹಾಕಿದ್ದಾರೆ. ಈ ವೇಳೆ ಸೂರ್ಯನ ಬ್ಯಾಟ್ನಿಂದ 3 ಶತಕ ಹಾಗೂ 13 ಅರ್ಧಶತಕಗಳು ಕೂಡ ಮೂಡಿಬಂದಿವೆ.