IND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್

Updated on: Jan 31, 2026 | 10:31 PM

Suryakumar Yadav Breaks Kohli Record: ಸೂರ್ಯಕುಮಾರ್ ಯಾದವ್ ತಿರುವನಂತಪುರಂ T20 ಸರಣಿಯಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿ ಮಿಂಚಿದರು. ಸರಣಿಯಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 242 ರನ್ ಗಳಿಸಿ, ಒಂದು T20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕನಾಗಿ ವಿರಾಟ್ ಕೊಹ್ಲಿ ದಾಖಲೆ ಮುರಿದರು. ಇದರೊಂದಿಗೆ, ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಮಹತ್ವದ ಕೀರ್ತಿಗೂ ಪಾತ್ರರಾದರು. ಇದು ಅವರ ಅದ್ಭುತ ಫಾರ್ಮ್‌ಗೆ ಸಾಕ್ಷಿಯಾಗಿದೆ.

1 / 7
ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಮೂರನೇ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಮುರಿದಿದಲ್ಲದೆ ವಿಶ್ವ ದಾಖಲೆಯನ್ನು ಸೃಷ್ಟಿಸಿದರು.

2 / 7
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 271 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ತಂಡದ ಪರ ನಾಯಕ ಸೂರ್ಯಕುಮಾರ್ ಕೇವಲ 30 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್‌ಗಳನ್ನು ಒಳಗೊಂಡಂತೆ 63 ರನ್ ಬಾರಿಸಿದರು. ಇದರ ಜೊತೆಗೆ ಇಶಾನ್ ಕಿಶನ್ ಅವರೊಂದಿಗೆ ಶತಕದ ಜೊತೆಯಾಟವನ್ನು ನಡೆಸಿದರು.

3 / 7
ಈ ಸರಣಿಗೂ ಮುನ್ನ ಸೂರ್ಯಕುಮಾರ್ ಅವರ ಫಾರ್ಮ್ ಬಗ್ಗೆ ಹಲವು ಪ್ರಶ್ನೆಗಳಿದ್ದವು. ಆದರೆ ಈ ಸರಣಿಯಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದ ಸೂರ್ಯ ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 242 ರನ್ ಕಲೆಹಾಕಿದರು. ಇದರೊಂದಿಗೆ, ಒಂದು ಟಿ20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕ ಎನಿಸಿಕೊಂಡರು. ಈ ಮೂಲಕ ಸೂರ್ಯ, ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು.

4 / 7
ವಿರಾಟ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ 231 ರನ್ ಗಳಿಸಿದ್ದರು, ಇದು ಅವರ ಇದುವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ. ಇದೀಗ ಸೂರ್ಯಕುಮಾರ್ 242 ರನ್‌ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮೊದಲು, ವಿರಾಟ್ ಕೊಹ್ಲಿ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 181 ರನ್ ಬಾರಿಸಿ ಎರಡನೇ ಸ್ಥಾನವನ್ನೂ ತಮ್ಮದಾಗಿಸಿಕೊಂಡಿದ್ದರು.

5 / 7
ಈ ದಾಖಲೆಯ ಜೊತೆಗೆ ಮತ್ತೊಂದು ವಿಶ್ವ ದಾಖಲೆಯನ್ನು ಸೃಷ್ಟಿಸಿದ ಸೂರ್ಯ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್‌ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ಸೂರ್ಯ 1,822 ಎಸೆತಗಳಲ್ಲಿ 3,000 ಟಿ20ರನ್‌ಗಳನ್ನು ಪೂರ್ಣಗೊಳಿಸಿದರು. ಈ ಹಿಂದೆ, ಈ ದಾಖಲೆಯನ್ನು ಯುಎಇಯ ಮೊಹಮ್ಮದ್ ವಾಸಿಮ್ ಹೊಂದಿದ್ದರು, ಅವರು 1,947 ಎಸೆತಗಳಲ್ಲಿ 3,000 ಟಿ20 ರನ್‌ ಪೂರೈಸಿದ್ದರು.

6 / 7
ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ಭಾರತ ಪರ 3000 ಟಿ20 ಅಂತರರಾಷ್ಟ್ರೀಯ ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ 2149 ಎಸೆತಗಳಲ್ಲಿ ಈ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ 2169 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

7 / 7
ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಕ್ರಮವಾಗಿ 32 ರನ್‌, ಎರಡನೇ ಪಂದ್ಯದಲ್ಲಿ ಅಜೇಯ 82 ರನ್‌, ಮೂರನೇ ಪಂದ್ಯದಲ್ಲೂ ಅಜೇಯ 57 ರನ್, ನಾಲ್ಕನೇ ಪಂದ್ಯದಲ್ಲಿ ಕೇವಲ 8 ರನ್‌, ಇದೀಗ ಐದನೇ ಪಂದ್ಯದಲ್ಲಿ 63 ರನ್ ಬಾರಿಸಿದರು. ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಒಟ್ಟು 25 ಬೌಂಡರಿಗಳು ಮತ್ತು 14 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.