ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್

Suryakumar Yadav: ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 21, 2023 | 7:21 PM

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

1 / 5
ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

2 / 5
ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ  ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

3 / 5
ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

5 / 5
Follow us