Suryakumar Yadav: ಉಡುಪಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

|

Updated on: Jul 09, 2024 | 11:56 AM

Suryakumar Yadav - Devisha shetty: ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಮಂಗಳೂರಿನವರು. ಮುಂಬೈನಲ್ಲಿ ನೆಲೆಸಿರುವ ದೇವಿಶಾ ಹಾಗೂ ಸೂರ್ಯ ಒಂದೇ ಕಾಲೇಜ್​ನಲ್ಲಿ ಓದಿದ್ದಾರೆ. ಇದೇ ವೇಳೆ ಇಬ್ಬರು ನಡುವೆ ಪ್ರೇಮಾಂಕುರವಾಗಿದ್ದು, 2016 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಪತ್ನಿಯ ಊರಿಗೆ ಬಂದು ಸೂರ್ಯಕುಮಾರ್ ಯಾದವ್ ವಿಶ್ವಕಪ್ ಗೆಲುವಿನ ಹರಕೆ ತೀರಿಸಿದ್ದಾರೆ.

1 / 5
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

3 / 5
ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

4 / 5
ಅದರಂತೆ ಮಂಗಳವಾರ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿ ತೆರಳಿದ್ದಾರೆ. ಇದೀಗ ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 5
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷ.