ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮೇಲೆ ಸೂರ್ಯನ ಕಣ್ಣು..!

Updated on: Oct 05, 2024 | 2:10 PM

India vs Bangladesh, 1st T20I: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಈ ಪಂದ್ಯವು ರಾತ್ರಿ 7 ಗಂಟೆಯಿಂದ ಶುರುವಾಗಲಿದ್ದು, ಈ ಮ್ಯಾಚ್​ ಮೂಲಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿರುವ ವಿಶೇಷ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶ ಸೂರ್ಯಕುಮಾರ್ ಯಾದವ್ ಮುಂದಿದೆ.

1 / 5
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ನಾಳೆ (ಅಕ್ಟೋಬರ್ 6) ನಡೆಯಲಿದೆ. ಈ ಪಂದ್ಯದ ಮೂಲಕ ಹೊಸ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದೇ ವಿಶೇಷ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ನಾಳೆ (ಅಕ್ಟೋಬರ್ 6) ನಡೆಯಲಿದೆ. ಈ ಪಂದ್ಯದ ಮೂಲಕ ಹೊಸ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದೇ ವಿಶೇಷ.

2 / 5

ಅಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2010 ರಿಂದ 2024 ರವರೆಗೆ ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

3 / 5

ಈ ದಾಖಲೆಯನ್ನು ಸರಿಗಟ್ಟಿರುವ ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಒಂದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಟೀಮ್ ಇಂಡಿಯಾ ಪರ ಈವರೆಗೆ 71 ಟಿ20 ಪಂದ್ಯಗಳನ್ನಾಡಿರುವ ಸೂರ್ಯ 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

4 / 5

ಹೀಗಾಗಿ ಬಾಂಗ್ಲಾದೇಶ್ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಲಿದೆ. ಅಲ್ಲದೆ 75 ಕ್ಕಿಂತ ಕಡಿಮೆ ಪಂದ್ಯಗಳಲ್ಲಿ 16 ಕ್ಕಿಂತ ಅಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ ಏಕೈಕ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

ಅತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಕಾರಣ ಈ ದಾಖಲೆ ಮುಂದುವರೆಯುವುದಿಲ್ಲ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಬಳಿಕವೂ ಕೂಡ ಸೂರ್ಯಕುಮಾರ್ ಯಾದವ್​ಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಉತ್ತಮ ಅವಕಾಶವಿದೆ. ಹಾಗಾಗಿ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಈ ವರ್ಲ್ಡ್ ರೆಕಾರ್ಡ್ ಮುಂದೊಂದು ದಿನ ಸೂರ್ಯನ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us