Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
TV9 Web | Updated By: ಝಾಹಿರ್ ಯೂಸುಫ್
Updated on:
Jan 07, 2023 | 11:07 PM
Suryakumar Yadav Records: ಟೀಮ್ ಇಂಡಿಯಾ ಪರ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.
1 / 6
ರಾಜ್ಕೋಟ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.
2 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.
3 / 6
ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
4 / 6
ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.
5 / 6
ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.
6 / 6
ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್ನೊಂದಿಗೆ ಅಜೇಯ 112 ರನ್ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
Published On - 10:17 pm, Sat, 7 January 23