AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸುಝಿ ಬೇಟ್ಸ್

Suzie Bates World Record: ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೇವಲ 7 ಆಟಗಾರ್ತಿಯರು ಮಾತ್ರ 300 ಪಂದ್ಯಗಳನ್ನಾಡಿದ್ದಾರೆ. ಈ ಏಳು ಆಟಗಾರ್ತಿಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ನ್ಯೂಝಿಲೆಂಡ್​ನ ಸುಝಿ ಬೇಟ್ಸ್​. ಇದೀಗ ಅಗ್ರಸ್ಥಾನದೊಂದಿಗೆ ಸುಝಿ ಬೇಟ್ಸ್ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 07, 2025 | 1:09 PM

Share
ನ್ಯೂಝಿಲೆಂಡ್ ತಂಡದ ಆಟಗಾರ್ತಿ ಸುಝಿ ಬೇಟ್ಸ್ (Suzie Bates) ಮಹಿಳಾ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ಇಂದೋರ್​ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ 7ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಸುಝಿ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಸುಝಿ ಬೇಟ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 350 ಪಂದ್ಯಗಳನ್ನಾಡಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ  38 ವರ್ಷದ ಸುಝಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 5
2006 ರಲ್ಲಿ ಭಾರತದ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ ಸುಝಿ ಬೇಟ್ಸ್ ಈವರೆಗೆ 173 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 166 ಇನಿಂಗ್ಸ್ ಆಡಿರುವ ಅವರು 13 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 5896 ರನ್ ಕಲೆಹಾಕಿದ್ದಾರೆ. ಅಲ್ಲದೆ 81 ಏಕದಿನ ವಿಕೆಟ್​ಗಳನ್ನು ಸಹ ಪಡೆದಿದ್ದಾರೆ.

3 / 5
ಇನ್ನು 2007 ರಲ್ಲಿ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನ ಶುರು ಮಾಡಿದ ಸುಝಿ ಈವರೆಗೆ ಆಡಿರುವುದು ಬರೋಬ್ಬರಿ 177 ಪಂದ್ಯಗಳು. ಈ ವೇಳೆ 174 ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4343 ರನ್ ಕಲೆಹಾಕಿದ್ದಾರೆ. ಹಾಗೆಯೇ 60 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

4 / 5
ಇದೀಗ ಭಾರತದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್​ನೊಂದಿಗೆ ಸುಝಿ ಬೇಟ್ಸ್ ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಳಿಸುವುದು ಬಹುತೇಕ ಖಚಿತ. ಅದಕ್ಕೂ ಮುನ್ನ 350 ಏಕದಿನ ಪಂದ್ಯಗಳ ಮೈಲುಗಲ್ಲಿನ ಮೂಲಕ ಹೊಸ ವಿಶ್ವ ದಾಖಲೆಯನ್ನು ಸುಝಿ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 1:08 pm, Tue, 7 October 25

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ

ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ

‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ

ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ