Chris Lynn: 6,6,6,6,6: ಕ್ರಿಸ್ ಲಿನ್ ತೂಫಾನ್ ಶತಕ
TV9 Web | Updated By: ಝಾಹಿರ್ ಯೂಸುಫ್
Updated on:
Jun 03, 2023 | 11:28 PM
T20 BLAST 2023: ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
1 / 8
T20 BLAST 2023: ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಲೀಗ್ನಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ರಿಸ್ ಲಿನ್ ಸಿಡಿಲಬ್ಬರದ ಶತಕ ಸಿಡಿಸಿ ಅಬ್ಬರಿಸಿದ್ದಾರೆ.
2 / 8
ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. 56 ರನ್ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಆ ಬಳಿಕ ಲೂಯಿಸ್ ಕಿಂಬರ್ ಆಸರೆಯಾದರು.
3 / 8
27 ಎಸೆತಗಳನ್ನು ಎದುರಿಸಿದ ಕಿಂಬರ್ 3 ಭರ್ಜರಿ ಸಿಕ್ಸರ್ ಹಾಗೂ 2 ಫೋರ್ನೊಂದಿಗೆ 41 ರನ್ ಚಚ್ಚಿದರು. ಪರಿಣಾಮ 20 ಓವರ್ ಮುಕ್ತಾಯದ ವೇಳೆಗೆ ಲೀಸೆಸ್ಟರ್‌ಶೈರ್ ತಂಡವು 8 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು.
4 / 8
165 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಎಮಿಲಿಯೋ ಕೇವಲ 13 ರನ್ಗಳಿಸಿ ಔಟಾದರು. ಆದರೆ ಮತ್ತೊಂದೆಡೆ ಅಬ್ಬರ ಶುರು ಮಾಡಿದ ಕ್ರಿಸ್ ಲಿನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
5 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಲಿನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನಟ್ಟಿದರು. ಪರಿಣಾಮ 10 ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತ 100ರ ಗಡಿದಾಟಿತು. ಇದಾಗ್ಯೂ ಲಿನ್ ಅಬ್ಬರ ಮಾತ್ರ ಕಡಿಮೆಯಾಗಿರಲಿಲ್ಲ.
6 / 8
5 ಭರ್ಜರಿ ಸಿಕ್ಸ್ ಹಾಗೂ 13 ಫೋರ್ಗಳನ್ನು ಚಚ್ಚಿದ ಕ್ರಿಸ್ ಲಿನ್ ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ ಅಜೇಯ 110 ರನ್ ಬಾರಿಸುವ ಮೂಲಕ 18.5 ಓವರ್ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.
7 / 8
ಭರ್ಜರಿ ಸೆಂಚುರಿ ಸಿಡಿಸಿ ನಾರ್ಥಾಂಪ್ಟನ್‌ಶೈರ್ ತಂಡದ ಗೆಲುವಿನ ರೂವಾರಿಯಾದ ಕ್ರಿಸ್ ಲಿನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.
8 / 8
ಅಂದಹಾಗೆ ಈ ಬಾರಿಯ ಐಪಿಎಲ್ನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಲಿನ್ ತಮ್ಮ ಸ್ಪೋಟಕ ಬ್ಯಾಟಿಂಗ್ನ ಝಲಕ್ ತೋರಿಸಿದ್ದಾರೆ.