AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Rankings: ಶೂನ್ಯ ಸರದಾರ ಸೂರ್ಯಕುಮಾರ್ ಯಾದವ್ ಕೈತಪ್ಪಿತಾ ನಂ.1 ಪಟ್ಟ?

T20 Rankings: ಸದ್ಯ ಐಪಿಎಲ್​ನಲ್ಲಿ ಬ್ಯುಸಿಯಾಗಿರುವ ಸೂರ್ಯಕುಮಾರ್ ಇಲ್ಲೂ ಕೂಡ ಸತತ ವೈಫಲ್ಯಗಳಿಂದ ಬಳಲುತ್ತಿದ್ದಾರೆ. ಐಪಿಎಲ್‌ನಲ್ಲಿ ಇದುವರೆಗೆ ಮೂರು ಇನ್ನಿಂಗ್ಸ್‌ಗಳನ್ನಾಡಿರುವ ಸೂರ್ಯ ಇದುವರೆಗೆ ಕೇವಲ 16 ರನ್ ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on:Apr 12, 2023 | 5:19 PM

Share
ಎರಡು ತಿಂಗಳ ಹಿಂದೆಯಷ್ಟೇ ವಿಶ್ವ ಕ್ರಿಕೆಟ್​ನ ಸೂಪರ್​ ಸ್ಟಾರ್ ಆಗಿ ಮೆರೆಯುತ್ತಿದ್ದ ಸೂರ್ಯಕುಮಾರ್ ಯಾದವ್ ಸದ್ಯ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್‌ ನೆಲದಲ್ಲಿ ರನ್ ಮಳೆ ಸುರಿಸಿದ್ದ  ಸೂರ್ಯಕುಮಾರ್ ಯಾದವ್​ಗೆ ಇದೀಗ ಬಿಗ್ ಇನ್ನಿಂಗ್ಸ್ ಆಡುವುದಿರಲಿ ಖಾತೆ ಕೂಡ ತೆರೆಯಲಾಗುತ್ತಿಲ್ಲ. ಆದರೂ ಟಿ20 ಕ್ರಿಕೆಟ್​ನಲ್ಲಿ ಸೂರ್ಯಕುಮಾರ್​ ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದಾರೆ.

1 / 10
ಬುಧವಾರ ಬಿಡುಗಡೆಯಾದ ಐಸಿಸಿ ನೂತನ ಟಿ20 ರ್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್ ತಮ್ಮ ನಂಬರ್ ಒನ್ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸೂರ್ಯಕುಮಾರ್ ಯಾದವ್ ಯಾವುದೇ ಅಂತರರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿಲ್ಲ, ಆದರೆ ಇದರ ಹೊರತಾಗಿಯೂ, ಯಾವುದೇ ಬ್ಯಾಟ್ಸ್‌ಮನ್​ಗೂ ಅವರ ನಂಬರ್ ಒನ್ ಸ್ಥಾನವನ್ನು ಕಸಿದುಕೊಳ್ಳಲು ಸಾಧ್ಯವಾಗಿಲ್ಲ.

2 / 10
ಕಳೆದ ವರ್ಷ ನವೆಂಬರ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದ ಸೂರ್ಯಕುಮಾರ್, ಟಿ20 ಕ್ರಿಕೆಟ್​ ಶ್ರೇಯಾಂಕದಲ್ಲಿ 906 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

3 / 10
ಸದ್ಯ ಐಪಿಎಲ್​ನಲ್ಲಿ ಬ್ಯುಸಿಯಾಗಿರುವ ಸೂರ್ಯಕುಮಾರ್ ಇಲ್ಲೂ ಕೂಡ ಸತತ ವೈಫಲ್ಯಗಳಿಂದ ಬಳಲುತ್ತಿದ್ದಾರೆ. ಐಪಿಎಲ್‌ನಲ್ಲಿ ಇದುವರೆಗೆ ಮೂರು ಇನ್ನಿಂಗ್ಸ್‌ಗಳನ್ನಾಡಿರುವ ಸೂರ್ಯ ಇದುವರೆಗೆ ಕೇವಲ 16 ರನ್ ಗಳಿಸಿದ್ದಾರೆ. ಈ ಹಿಂದೆ ಅಂದರೆ, ಮಾರ್ಚ್‌ನಲ್ಲಿ, ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರು ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಔಟಾಗಿದ್ದರು.

4 / 10
ಹೊಸ ರ‍್ಯಾಂಕಿಂಗ್‌ನ ಅಗ್ರ 10ರಲ್ಲಿ ಸೂರ್ಯ ಬಿಟ್ಟರೆ ಭಾರತದ ಬೇರಾವ ಬ್ಯಾಟ್ಸ್‌ಮನ್ ಸ್ಥಾನ ಪಡೆದಿಲ್ಲ. ಸೂರ್ಯರನ್ನು ಹೊರತುಪಡಿಸಿ ಪಾಕಿಸ್ತಾನದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ 811 ಅಂಕಗಳೊಂದಿಗೆ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

5 / 10
ನೂತನ ಶ್ರೇಯಾಂಕದಲ್ಲಿ ಬಂಪರ್ ಪ್ರಯೋಜನ ಪಡೆದಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್, ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡೆವೊನ್ ಕಾನ್ವೇ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದಾರೆ.

6 / 10
4ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಏಡೆನ್ ಮಾರ್ಕ್ರಾಮ್ ಇದ್ದಾರೆ.

7 / 10
5ನೇ ಸ್ಥಾನದಲ್ಲಿ 745 ರೇಟಿಂಗ್ ಪಾಯಿಂಟ್ ಹೊಂದಿರುವ ನ್ಯೂಜಿಲೆಂಡ್​ ತಂಡದ ಆರಂಭಿಕ ಆಟಗಾರ ಡಿವೋನ್ ಕಾನ್ವೇ ಇದ್ದಾರೆ.

8 / 10
ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಟೀಂ ಇಂಡಿಯಾದ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ 250 ರೇಟಿಂಗ್ ಪಾಯಿಂಟ್​ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.

9 / 10
ಇನ್ನು ಟಿ20 ಕ್ರಿಕೆಟ್​ನ ಬೆಸ್ಟ್ ಬೌಲರ್​ ವಿಷಯಕ್ಕೆ ಬಂದರೆ ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ.

10 / 10

Published On - 5:19 pm, Wed, 12 April 23