ಇಂಗ್ಲೆಂಡ್ ವಿರುದ್ಧದ 6ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ (Babar Azam) ಆಜಂ 59 ಎಸೆತಗಳಲ್ಲಿ 87 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಸಾಧನೆಯೊಂದಿಗೆ ಪಾಕ್ ನಾಯಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯ (Virat Kohli) ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.