- TV9 Kannada Kannada News Photos Cricket Photos Arshdeep Singh Breaks Bumrah's T20 WC Wicket Record as India Dominates Zimbabwe
T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್
Arshdeep Singh T20 World Cup record: ಭಾರತವು 2026ರ ಟಿ20 ವಿಶ್ವಕಪ್‌ನ ಸೂಪರ್ 8ರಲ್ಲಿ ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡರು. ಇದು ತಂಡದ ಒಟ್ಟಾರೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.
Updated on: Feb 27, 2026 | 5:54 PM

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು.

ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್ ಪಡೆದರು. ಇದರೊಂದಿಗೆ, ಅವರು ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು. ಈ ದಾಖಲೆ ಈ ಹಿಂದೆ ಜಸ್ಪ್ರೀತ್ ಬುಮ್ರಾ ಅವರ ಹೆಸರಿನಲ್ಲಿತ್ತು.

ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 33 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೀಗ ಬುಮ್ರಾರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್ 35 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ 19 ಪಂದ್ಯಗಳನ್ನಾಡಿರುವ ಅರ್ಷದೀಪ್ 14.25 ಸರಾಸರಿಯಲ್ಲಿ 35 ವಿಕೆಟ್‌ಗಳನ್ನು ಪಡೆದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಆರಂಭಿಕ ಓವರ್ಗಳಲ್ಲಿ ಅರ್ಷದೀಪ್ ಸಿಂಗ್ ವಿಕೆಟ್ ಪಡೆಯಲಿಲ್ಲ. ಆದರೆ ಆ ನಂತರ ಅದ್ಭುತ ಕಮ್‌ಬ್ಯಾಕ್ ಮಾಡಿದ ಅರ್ಷದೀಪ್, ಮೊದಲು ಸಿಕಂದರ್ ರಾಜಾ ಅವರನ್ನು ಔಟ್ ಮಾಡಿದರು, ನಂತರ ಅದೇ ಓವರ್‌ನಲ್ಲಿ ರಯಾನ್ ಬರ್ಲ್ ಅವರನ್ನು ಔಟ್ ಮಾಡಿದರು. ಕೊನೆಯಲ್ಲಿ ಅದ್ಭುತ ಯಾರ್ಕರ್ ಮೂಲಕ ಟೋನಿ ಮುನ್ಯೊಂಗಾ ಅವರನ್ನು ಬೌಲ್ಡ್ ಮಾಡಿದರು.

ಈ ದಾಖಲೆಯಲ್ಲದೆ ಅರ್ಷದೀಪ್ ಸಿಂಗ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ. ಭಾರತದ ಪರ ಇದುವರೆಗೆ 81 ಪಂದ್ಯಗಳನ್ನಾಡಿರುವ ಅರ್ಷದೀಪ್ 126 ವಿಕೆಟ್‌ಗಳನ್ನು ಪಡೆದಿದ್ದಾರೆ. ಅರ್ಷದೀಪ್ ಹೊರತುಪಡಿಸಿ ಬೇರೆ ಯಾವುದೇ ಬೌಲರ್ 120 ವಿಕೆಟ್‌ಗಳ ಗಡಿಯನ್ನು ತಲುಪಿಲ್ಲ.

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



