India Playing 11: ಬಲಿಷ್ಠ ಬಳಗವನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ: ಪ್ಲೇಯಿಂಗ್ 11 ಹೀಗಿದೆ
TV9 Web | Updated By: ಝಾಹಿರ್ ಯೂಸುಫ್
Updated on:
Oct 31, 2021 | 7:08 PM
India vs New Zealand Playing 11: ಟಿ20 ಕ್ರಿಕೆಟ್ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ 17 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಭಾರತ ತಂಡವು 8 ಬಾರಿ ಗೆದ್ದರೆ, ನ್ಯೂಜಿಲೆಂಡ್ ಕೂಡ ಟೀಮ್ ಇಂಡಿಯಾ ವಿರುದ್ದ 8 ಜಯ ಸಾಧಿಸಿದೆ.
1 / 5
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ-ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
2 / 5
ಉಭಯ ತಂಡಗಳಿಗೂ ಇದು ನಿರ್ಣಾಯಕ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
3 / 5
ಟಿ20 ಕ್ರಿಕೆಟ್ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ 17 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಭಾರತ ತಂಡವು 8 ಬಾರಿ ಗೆದ್ದರೆ, ನ್ಯೂಜಿಲೆಂಡ್ ಕೂಡ ಟೀಮ್ ಇಂಡಿಯಾ ವಿರುದ್ದ 8 ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಹೀಗಾಗಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಅದರಂತೆ ಸೂರ್ಯಕುಮಾರ್ ಬದಲಿಗೆ ಇಶಾನ್ ಕಿಶನ್ ಹಾಗೂ ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ.
4 / 5
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಆಡಮ್ ಮಿಲ್ನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ
5 / 5
Team India