Updated on:Oct 23, 2022 | 5:32 PM
ಮೆಲ್ಬೋರ್ನ್ನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.
37 ವರ್ಷ, 142 ದಿನಗಳಾಗಿರುವ ದಿನೇಶ್ ಕಾರ್ತಿಕ್ ಪಾಕ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತದ ಪರ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡ ಹಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ವೇಗಿ ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. 36 ವರ್ಷದವರಾಗಿದ್ದ ನೆಹ್ರಾ 2016 ರ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದರು.
ಇದೀಗ 37 ವಯಸ್ಸಿನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
Published On - 5:30 pm, Sun, 23 October 22