AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 world cup 2022: ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಕ್ರಿಕೆಟಿಗರಿವರು

T20 world cup 2022: ಸೂರ್ಯ ಇದುವರೆಗೆ ಒಟ್ಟು 34 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 176.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟಿಂಗ್ ಮಾಡಿ, 38.70 ಸರಾಸರಿಯೊಂದಿಗೆ 1045 ರನ್ ಗಳಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Oct 16, 2022 | 4:20 PM

Share
ಅಕ್ಟೋಬರ್ 16 ರಿಂದ ಅರ್ಹತಾ ಪಂದ್ಯಗಳೊಂದಿಗೆ ಟಿ20 ವಿಶ್ವಕಪ್ ಮಹಾಕಾವ್ಯ ಆರಂಭವಾಗಿದೆ. ಟಿ20 ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಮೇಲುಗೈ ಸಾಧಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದಾಗ್ಯೂ, ಬೌಲರ್‌ಗಳು ಸಹ ತಮ್ಮ ಮಾಂತ್ರಿಕ ಬೌಲಿಂಗ್​ನಿಂದ ಬ್ಯಾಟರ್ಸ್​ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗುತ್ತಾರೆ. ಆದರೆ ಇನ್ನೂ ಕೆಲವು ಬ್ಯಾಟರ್​ಗಳು ತಮ್ಮ ಬಿರುಗಾಳಿ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕನೇ ಬದಲಾಯಿಸುತ್ತಾರೆ. ಪ್ರಸ್ತುತ ಟಿ20 ಕ್ರಿಕೆಟ್​ನಲ್ಲಿರುವ ಅಂತಹ ಬಿರುಗಾಳಿ ಬ್ಯಾಟರ್‌ಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

1 / 9
ಭಾರತದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಪ್ರಸ್ತುತ ತಮ್ಮ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಹುಚ್ಚರನ್ನಾಗಿ ಮಾಡುತ್ತಿದ್ದಾರೆ. ಅವರ ವಿಶಿಷ್ಟ ಬ್ಯಾಟಿಂಗ್ ಶೈಲಿ ಎಲ್ಲರನ್ನೂ ಆಕರ್ಷಿಸುತ್ತಿದೆ. 2021ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ಇದೀಗ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಸೂರ್ಯ ಇದುವರೆಗೆ ಒಟ್ಟು 34 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 176.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟಿಂಗ್ ಮಾಡಿ, 38.70 ಸರಾಸರಿಯೊಂದಿಗೆ 1045 ರನ್ ಗಳಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಈ ಟೀಮ್ ಇಂಡಿಯಾ ಮಿಸ್ಟರ್ 360 ಡಿಗ್ರಿ ಆಟಗಾರನ ಆಕ್ರಮಣಕಾರಿ ಆಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

2 / 9
ನ್ಯೂಜಿಲೆಂಡ್ ಆಲ್ ರೌಂಡರ್ ಜಿಮ್ಮಿ ನೀಶಮ್ ಕೂಡ ಹೊಡಿಬಡಿ ಆಟಕ್ಕೆ ಹೆಸರವಾಸಿಯಾಗಿದ್ದು, ಜಿಮ್ಮಿ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 53 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು 163.65 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 635 ರನ್ ಗಳಿಸಿದ್ದಾರೆ.

3 / 9
ನ್ಯೂಜಿಲೆಂಡ್‌ನ ಹಾಲಿ ಯುವ ಆಟಗಾರ ಫಿನ್ ಅಲೆನ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. 23ರ ಹರೆಯದ ಫಿನ್ ಅಲೆನ್ ನ್ಯೂಜಿಲೆಂಡ್ ಪರ ಇದುವರೆಗೆ ಒಟ್ಟು 18 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು 161.72 ಸ್ಟ್ರೈಕ್ ರೇಟ್‌ನಲ್ಲಿ 469 ರನ್ ಗಳಿಸಿದ್ದಾರೆ.

4 / 9
ಆಸ್ಟ್ರೇಲಿಯಾದ ಉದಯೋನ್ಮುಖ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಪ್ರಸ್ತುತ ಆಸ್ಟ್ರೇಲಿಯಾ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಟಿಮ್ ಇದುವರೆಗೆ ಒಟ್ಟು 22 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು 160.08 ಸ್ಟ್ರೈಕ್ ರೇಟ್‌ನಲ್ಲಿ 714 ರನ್ ಗಳಿಸಿದ್ದಾರೆ.

5 / 9
ವೆಸ್ಟ್ ಇಂಡೀಸ್‌ನ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಹೆಚ್ಚಿನ ಸ್ಟ್ರೈಕ್ ರೇಟ್‌ನೊಂದಿಗೆ ರನ್ ಗಳಿಸುತ್ತಿದ್ದಾರೆ. ಅವರಲ್ಲಿ ಎವಿನ್ ಲೂಯಿಸ್ ಕೂಡ ಒಬ್ಬರಾಗಿದ್ದು, ಲೂಯಿಸ್, ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಂಡರಿಗಿಂತಲೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರು ಇಲ್ಲಿಯವರೆಗೆ ಒಟ್ಟು 110 ಸಿಕ್ಸರ್ ಮತ್ತು 106 ಬೌಂಡರಿಗಳನ್ನು ಬಾರಿಸಿದ್ದಾರೆ. ಇದುವರೆಗೆ ಒಟ್ಟು 50 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಲೂಯಿಸ್ 155.52 ಸ್ಟ್ರೈಕ್ ರೇಟ್‌ನೊಂದಿಗೆ ರನ್ ಗಳಿಸಿದ್ದಾರೆ.

6 / 9
ಆಫ್ರಿಕಾದ ಬ್ಯಾಟ್ಸ್‌ಮನ್ ರಿಲೆ ರೊಸ್ಸೊ ಇದುವರೆಗೆ ದಕ್ಷಿಣ ಆಫ್ರಿಕಾ ಪರ ಒಟ್ಟು 21 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು 37.20 ಸರಾಸರಿ ಮತ್ತು 152.87 ಸ್ಟ್ರೈಕ್ ರೇಟ್‌ನಲ್ಲಿ 558 ರನ್ ಗಳಿಸಿದ್ದಾರೆ.

7 / 9
ಇತ್ತೀಚಿನ ದಿನಗಳಲ್ಲಿ ಸ್ಥಿರವಾಗಿ ಬ್ಯಾಟಿಂಗ್ ಮಾಡುತ್ತಿರುವ ಆಫ್ರಿಕನ್ ಬ್ಯಾಟ್ಸ್‌ಮನ್ ಏಡನ್ ಮಾರ್ಕ್ರಾಮ್ ಕ್ಲಾಸ್ ಬ್ಯಾಟ್ಸ್‌ಮನ್ ಆದರೆ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಆಫ್ರಿಕಾ ಪರ ಇದುವರೆಗೆ ಒಟ್ಟು 26 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಅವರು 41.05 ಸರಾಸರಿ ಮತ್ತು 151.16 ಸ್ಟ್ರೈಕ್ ರೇಟ್‌ನಲ್ಲಿ 780 ರನ್ ಗಳಿಸಿದ್ದಾರೆ.

8 / 9
ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಇಲ್ಲದೆ ಯಾವುದೇ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳ ಪಟ್ಟಿ ಪೂರ್ಣಗೊಳ್ಳುವುದಿಲ್ಲ. ಮ್ಯಾಕ್ಸ್‌ವೆಲ್ ತಮ್ಮ ವೇಗದ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದು, ಸದ್ಯಕ್ಕೆ ಅವರ ಫಾರ್ಮ್ ಕೊರತೆ ಕೊಂಚ ನಿರಾಸೆ ಮೂಡಿಸಿದೆ. ಆದರೆ ಟಿ20 ವಿಶ್ವಕಪ್‌ನಲ್ಲಿ ಎಲ್ಲರ ಕಣ್ಣು ಅವರ ಮೇಲಿರುವುದರಲ್ಲಿ ಯಾವುದೇ ಸಂಶಯವಿಲ್ಲ. ಮ್ಯಾಕ್ಸ್‌ವೆಲ್ ಇದುವರೆಗೆ ಒಟ್ಟು 94 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 150.40 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ.

9 / 9

Published On - 4:11 pm, Sun, 16 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್