AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಯಶಸ್ವಿಯಾಗದ ಅಭ್ಯಾಸ ಪಂದ್ಯ: ಪಾಕಿಸ್ತಾನ ವಿರುದ್ಧದ ಕದನಕ್ಕೆ ಮೆಲ್ಬೋರ್ನ್ ತಲುಪಿದ ಟೀಮ್ ಇಂಡಿಯಾ

India vs Pakistan: ಅಭ್ಯಾಸ ಪಂದ್ಯ ಪೂರ್ಣಗೊಂಡ ಬಳಿಕ ಭಾರತ ಮೆಲ್ಬೋರ್ನ್​ಗೆ ತಲುಪಿದೆ. ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ ಎಮ್​ಸಿಜಿಗೆ ಕಾಲಿಟ್ಟಿದೆ.

TV9 Web
| Edited By: |

Updated on:Oct 20, 2022 | 9:47 AM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮುನ್ನ ಭಾರತಕ್ಕೆ ಆಯೋಜಿಸಿದ್ದ ಎರಡು ಅಧಿಕೃತ ಅಭ್ಯಾಸ ಪಂದ್ಯ ಕೊನೆಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ವಾರ್ಮ್​- ಅಪ್ ಮ್ಯಾಚ್​ನಲ್ಲಿ ರೋಚಕ ಜಯ ಸಾಧಿಸಿದರೆ, ದ್ವಿತೀಯ ಪಂದ್ಯ ಯಶಸ್ವಿಯಾಗಲಿಲ್ಲ. ಬುಧವಾರ ನ್ಯೂಜಿಲೆಂಡ್ ವಿರುದ್ಧ ಆಯೋಜಿಸಿದ್ದ ಎರಡನೆ ಅಭ್ಯಾಸ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಯಿತು.

1 / 7
ಇದೀಗ ಅಭ್ಯಾಸ ಪಂದ್ಯ ಪೂರ್ಣಗೊಂಡ ಬಳಿಕ ಭಾರತ ಮೆಲ್ಬೋರ್ನ್​ಗೆ ತಲುಪಿದೆ. ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ  ಎಮ್​ಸಿಜಿಗೆ ಕಾಲಿಟ್ಟಿದೆ.

2 / 7
ಯುಜ್ವೇಂದ್ರ ಚಹಲ್ ಅವರು ವಿಮಾನದಲ್ಲಿ ಮೆಲ್ಬೋರ್ನ್​ಗೆ ತೆರಳುತ್ತಿರುವ ಫೋಟೋವನ್ನು ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಜೊತೆ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ಪೋಸ್ಟ್ ಮಾಡಿದ್ದಾರೆ. ಶುಕ್ರವಾರದಿಂದ ಟೀಮ್ ಇಂಡಿಯಾ ಎಮ್​ಸಿಜಿಯಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಇನ್ನು ಭಾರತ- ಪಾಕ್ ಪಂದ್ಯ ನಡೆಯಲಿರುವ ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಸುತ್ತ ಮುತ್ತ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಈ ಪಂದ್ಯ ನಡೆಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ, ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಇಲ್ಲಿ ರದ್ದು ಮಾಡಿದರೆ ಮೀಸಲು ದಿನ ಇರುವುದಿಲ್ಲ. ಬದಲಾಗಿ ಉಭಯ ತಂಡಗಳಿಗೂ ತಲಾ 1 ಪಾಯಿಂಟ್ ನೀಡಲಾಗುತ್ತದೆ.

5 / 7
ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ. ಕೇವಲ ಒಂದು ಪಂದ್ಯದಲ್ಲಿ ಮಾತ್ರ ಪಾಕ್ ಪಡೆ ಗೆಲುವು ಸಾಧಿಸಿದೆ.

6 / 7
ಸೂಪರ್ 12 ಹಂತಕ್ಕೆ ಪ್ರವೇಶ ಪಡೆದಿದ್ದ ತಂಡಗಳ ಎಲ್ಲ ಅಭ್ಯಾಸ ಪಂದ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 22 ರಂದು ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಮುಖಾಮುಖಿ ಆಗುವ ಮೂಲಕ ಗ್ರೂಪ್ 1 ರಲ್ಲಿ ಮೊದಲ ಸೂಪರ್ 12 ಆರಂಭವಾಗಲಿದೆ.

7 / 7

Published On - 9:46 am, Thu, 20 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್