
ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲಕ್ಕೆ ಕಾಲಿಟ್ಟಿದೆ. ಶುಕ್ರವಾರ ಬೆಳಗ್ಗೆ ಪರ್ತ್ ತಲುಪಿದ ಟೀಂ ಇಂಡಿಯಾ ಇದೀಗ ಟಿ20 ವಿಶ್ವಕಪ್ ಗೆಲ್ಲುವ ತಯಾರಿ ಆರಂಭಿಸಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಆದರೆ ಈ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಮುಂದಿರುವ 4 ಸವಾಲುಗಳಿಗೆ ರೋಹಿತ್ ಪಡೆ ಉತ್ತರ ಕಂಡುಕೊಳ್ಳಬೇಕಾಗಿದೆ.

ಟೀಂ ಇಂಡಿಯಾ ಮುಂದಿರುವ ಮೊದಲ ಸವಾಲೆಂದರೆ, ರೋಹಿತ್ ಪಡೆ ಮೊದಲು ಆಸ್ಟ್ರೇಲಿಯದ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಬೇಕಿದೆ. ಪ್ರತಿಯೊಬ್ಬ ಆಟಗಾರನಿಗೆ ಇಲ್ಲಿನ ಪಿಚ್ ಮತ್ತು ಮೈದಾನದ ಬಗ್ಗೆ ಮಾಹಿತಿ ಅವಶ್ಯಕವಾಗಿದೆ. ಇದಾದ ಬಳಿಕ ಟೀಂ ಇಂಡಿಯಾ ಇಲ್ಲಿ ಇಂಟರ್ ಮ್ಯಾಚ್ ಆಡಬೇಕಿದೆ.

ಇದರೊಂದಿಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ತಂಡದಲ್ಲಿ ಯಾರನ್ನು ಆಡಿಸಬೇಕು ಎಂಬುದು ಟೀಮ್ ಇಂಡಿಯಾದ ಮುಂದಿರುವ 2ನೇ ದೊಡ್ಡ ಸವಾಲಾಗಿದೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಆಡುವ XI ನಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರವನ್ನು ಕಂಡುಹಿಡಿಯುವುದು ಬಹಳ ಮುಖ್ಯ. ಹೀಗಾಗಿ ಅಭ್ಯಾಸ ಪಂದ್ಯಗಳಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ ಇದೆ.

ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತದ ಮೊದಲ ಅಭ್ಯಾಸ ಪಂದ್ಯವು ಅಕ್ಟೋಬರ್ 17 ರಂದು ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದ್ದು, ಇದರ ನಂತರ ಭಾರತ ತಂಡ ಬ್ರಿಸ್ಬೇನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಎರಡು ಬಲಿಷ್ಠ ತಂಡಗಳೆದುರು ಗೆದ್ದು ಟಿ20 ವಿಶ್ವಕಪ್ನಲ್ಲಿ ಶುಭಾರಂಭ ಮಾಡುವ ಸವಾಲು ಟೀಂ ಇಂಡಿಯಾ ಮುಂದಿದೆ.

ಟೀಮ್ ಇಂಡಿಯಾದ ನಾಲ್ಕನೇ ಮತ್ತು ದೊಡ್ಡ ಕೆಲಸವೆಂದರೆ ನಿಖರವಾದ ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡುವುದು. ಅಭ್ಯಾಸ ಪಂದ್ಯಗಳ ನಂತರ, ಟೀಮ್ ಇಂಡಿಯಾ ಆಡುವ XI ಭಾಗವಾಗಿರುವ ತಮ್ಮ ವೇಗದ ಬೌಲರ್‌ಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದರೊಂದಿಗೆ ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಯಾರಿಗೆ ವಿಕೆಟ್ ಕೀಪರ್ ಆಗಿ ಅವಕಾಶ ನೀಡಬೇಕೆಂಬುದನ್ನೂ ನಿರ್ಧರಿಸಲಾಗುತ್ತದೆ.