AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!

India vs Pakistan T20 World Cup 2022: ಅಕ್ಟೋಬರ್ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ 2022 ರ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Oct 15, 2022 | 9:24 PM

Share
ಟಿ20 ವಿಶ್ವಕಪ್​ನಲ್ಲಿನ ಮಹಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕ್ ನಡುವಣ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ಬಾರಿ ಅದು ಕೇವಲ ಇಂಡೋ-ಪಾಕ್ ಕದನವಾಗಿರುವುದಿಲ್ಲ. ಬದಲಾಗಿ ಸೂರ್ಯಕುಮಾರ್ vs ಮೊಹಮ್ಮದ್ ರಿಜ್ವಾನ್ ಕೂಡ ಆಗಿರಲಿದೆ.

1 / 6
ಏಕೆಂದರೆ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಇತ್ತೀಚೆಗೆ ನ್ಯೂಜಿಲೆಂಡ್​ನಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದ ಮೂಲಕ ಈ ವರ್ಷ ಟಿ20ಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

2 / 6
ಆದರೆ ಇತ್ತ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಸಹ ಹಿಂದೆ ಬಿದ್ದಿಲ್ಲ. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯ ಈ ವರ್ಷ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇಲ್ಲಿ ಸೂರ್ಯಕುಮಾರ್ ಹಾಗೂ ಮೊಹಮ್ಮದ್ ರಿಜ್ವಾನ್ ನಡುವಣ ರನ್​ಗಳ ವತ್ಯಾಸ ಕೇವಲ 20. ಹೀಗಾಗಿಯೇ ಭಾರತ - ಪಾಕ್ ನಡುವಣ ಪಂದ್ಯದ ಮೂಲಕ ಯಾರು ನಂಬರ್ 1 ಆಗಲಿದ್ದಾರೆ ಎಂಬ ಕುತೂಹಲ ಕೂಡ ಮನೆ ಮಾಡಿದೆ.

3 / 6
2022 ರಲ್ಲಿ 23 ಟಿ20 ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ 801 ರನ್​ ಕಲೆಹಾಕಿದರೆ, ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ 18 ಇನಿಂಗ್ಸ್​ನಲ್ಲಿ 821 ರನ್ ಬಾರಿಸಿದ್ದಾರೆ. ಹೀಗಾಗಿ ಪಾಕ್ ವಿರುದ್ಧದ ಪಂದ್ಯದ ಮೂಲಕ ರಿಜ್ವಾನ್ ಅವರನ್ನು ಹಿಂದಿಕ್ಕುವ ಅವಕಾಶ ಸೂರ್ಯಕುಮಾರ್ ಮುಂದಿದೆ.

4 / 6
ಅಷ್ಟೇ ಅಲ್ಲದೆ ಟಿ20 ಶ್ರೇಯಾಂಕ ಪಟ್ಟಿಯಲ್ಲೂ ಈ ಪೈಪೋಟಿ ಕಂಡು ಬರಲಿದೆ. ಅಂದರೆ ಪ್ರಸ್ತುತ ಟಿ20 ರ್ಯಾಂಕಿಂಗ್​ನಲ್ಲಿ ಮೊಹಮ್ಮದ್ ರಿಜ್ವಾನ್ ನಂಬರ್ 1 ಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಹಾಗಾಗಿ ಸಾಂಪ್ರದಾಯಿಕ ಎದುರಾಳಿಗಳ ಕದನದಲ್ಲಿ ಉಭಯ ಆಟಗಾರರ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 6
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್

ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ