Updated on: Sep 29, 2022 | 3:25 PM
T20 World Cup 2022: ಟಿ20 ವಿಶ್ವಕಪ್‌ಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಭಾರತ ಸೇರಿದಂತೆ ಕೆಲ ತಂಡಗಳು ಮುಂಬರುವ ಕ್ರಿಕೆಟ್ ಕದನಕ್ಕಾಗಿ ತನ್ನ ನೂತನ ಜೆರ್ಸಿಯನ್ನು ಅನಾವರಗೊಳಿಸಿದೆ. ಇದೀಗ ಕಳೆದ ಬಾರಿಯ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ಕೂಡ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.
ಅದರಂತೆ ನ್ಯೂಜಿಲೆಂಡ್ ತಂಡವು ರೆಟ್ರೋ ಸ್ಟೈಲ್ ಜೆರ್ಸಿಯಲ್ಲಿ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದೆ. 1990 ರಲ್ಲಿ ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ನಲ್ಲಿ ಧರಿಸುತ್ತಿದ್ದ ಜೆರ್ಸಿಯಿಂದ ಸ್ಪೂರ್ತಿ ಪಡೆದು ಹೊಸ ಜೆರ್ಸಿಯನ್ನು ವಿನ್ಯಾಸಗೊಳಿಸಲಾಗಿದೆ.
ಕಿವೀಸ್ ತಂಡವು ಹಂಚಿಕೊಂಡ ಫೋಟೋದಲ್ಲಿ ಸ್ಟಾರ್ ಬ್ಯಾಟರ್ ಡೆವೊನ್ ಕಾನ್ವೇ ಮತ್ತು ಡ್ಯಾರಿಲ್ ಮಿಚೆಲ್ ಹೊಸ ಕಿಟ್ ಧರಿಸಿರುವುದನ್ನು ಕಾಣಬಹುದು. ಹಾಗೆಯೇ ವಿಡಿಯೋದಲ್ಲಿ ಟ್ರೆಂಟ್ ಬೌಲ್ಟ್, ಇಶ್ ಸೋಧಿ, ಮಾರ್ಟಿನ್ ಗಪ್ಟಿಲ್ ಸೇರಿದಂತೆ ಕೆಲ ಆಟಗಾರರು ಕಾಣಿಸಿಕೊಂಡಿದ್ದಾರೆ.
T20 ವಿಶ್ವಕಪ್‌ಗೆ ಮುಂಚಿತವಾಗಿ, ನ್ಯೂಜಿಲೆಂಡ್ ತಂಡವು ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಅಕ್ಟೋಬರ್ 7 ರಿಂದ ಟಿ20 ತ್ರಿಕೋನ ಸರಣಿಯನ್ನು ಆಯೋಜಿಸುತ್ತಿದೆ. ಈ ಸರಣಿಯಲ್ಲಿ ಕೇನ್ ವಿಲಿಯಮ್ಸನ್ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಪಾಕಿಸ್ತಾನದ ವಿರುದ್ಧ ಆಡಲಿದೆ.
ಇನ್ನು ಈ ಸರಣಿಯ ಫೈನಲ್ ಪಂದ್ಯವು ಅಕ್ಟೋಬರ್ 14 ರಂದು ನಡೆಯಲಿದೆ. ಇದಾದ ಬಳಿಕವಷ್ಟೇ ನ್ಯೂಜಿಲೆಂಡ್ ತಂಡವು ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾಗೆ ತೆರಳಲಿದೆ.
ಈ ಬಾರಿಯ ಟಿ20 ವಿಶ್ವಕಪ್ನ ಸೂಪರ್ 12 ಸುತ್ತಿನ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ನ್ಯೂಜಿಲೆಂಡ್ ತಂಡವು ವಿಶ್ವಕಪ್ ಅಭಿಯಾನ ಆರಂಭಿಸಲಿದೆ.