- Kannada News Photo gallery Cricket photos T20 World Cup 2022: Rohit Sharma surpasses Yuvraj Singh in six-hitter
Rohit Sharma: ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಾಖಲೆ ಉಡೀಸ್ ಮಾಡಿದ ಹಿಟ್ಮ್ಯಾನ್
T20 World Cup 2022: ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ 39 ಎಸೆತಗಳಲ್ಲಿ 4 ಫೋರ್ ಹಾಗೂ 3 ಸಿಕ್ಸ್ನೊಂದಿಗೆ 53 ರನ್ ಚಚ್ಚಿದ್ದರು.
Updated on: Oct 27, 2022 | 11:00 PM

ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 179 ರನ್ಗಳನ್ನು ಕಲೆಹಾಕಿತ್ತು. ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಮಿಂಚಿದ್ದರು.

ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ 39 ಎಸೆತಗಳಲ್ಲಿ 4 ಫೋರ್ ಹಾಗೂ 3 ಸಿಕ್ಸ್ನೊಂದಿಗೆ 53 ರನ್ ಚಚ್ಚಿದ್ದರು. ವಿಶೇಷ ಎಂದರೆ ಈ 3 ಸಿಕ್ಸ್ನೊಂದಿಗೆ ರೋಹಿತ್ ಶರ್ಮಾ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಆಟಗಾರನಾಗಿ ಇದುವರೆಗೆ ಯುವರಾಜ್ ಸಿಂಗ್ ಮಿಂಚಿದ್ದರು. ಯುವಿ ಬರೋಬ್ಬರಿ 33 ಸಿಕ್ಸ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಹಿಟ್ಮ್ಯಾನ್ ಅಳಿಸಿ ಹಾಕಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ದ 3 ಸಿಕ್ಸ್ ಸಿಡಿಸುವ ಮೂಲಕ ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಹಿಟ್ಮ್ಯಾನ್ ಇದುವರೆಗೆ 34 ಸಿಕ್ಸ್ ಸಿಡಿಸುವ ಮೂಲಕ ಈ ವಿಶೇಷ ದಾಖಲೆ ಬರೆದಿದ್ದಾರೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಆಗಿ ಕೂಡ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.

ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಟಿ20 ವಿಶ್ವಕಪ್ನಲ್ಲಿ ಒಟ್ಟು 63 ಸಿಕ್ಸ್ ಸಿಡಿಸುವ ಮೂಲಕ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.

ಇದೀಗ 34 ಸಿಕ್ಸ್ ಬಾರಿಸುವ ಮೂಲಕ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದರೆ, 33 ಸಿಕ್ಸ್ ಸಿಡಿಸಿದ ಯುವರಾಜ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ.



















