Rohit Sharma: ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಾಖಲೆ ಉಡೀಸ್ ಮಾಡಿದ ಹಿಟ್​ಮ್ಯಾನ್

| Updated By: ಝಾಹಿರ್ ಯೂಸುಫ್

Updated on: Oct 27, 2022 | 11:00 PM

T20 World Cup 2022: ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 39 ಎಸೆತಗಳಲ್ಲಿ 4 ಫೋರ್ ಹಾಗೂ 3 ಸಿಕ್ಸ್​ನೊಂದಿಗೆ 53 ರನ್ ಚಚ್ಚಿದ್ದರು.

1 / 7
ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲ್ಯಾಂಡ್ಸ್​ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 179 ರನ್​ಗಳನ್ನು ಕಲೆಹಾಕಿತ್ತು. ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಮಿಂಚಿದ್ದರು.

2 / 7
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 39 ಎಸೆತಗಳಲ್ಲಿ 4 ಫೋರ್ ಹಾಗೂ 3 ಸಿಕ್ಸ್​ನೊಂದಿಗೆ 53 ರನ್ ಚಚ್ಚಿದ್ದರು. ವಿಶೇಷ ಎಂದರೆ ಈ 3 ಸಿಕ್ಸ್​ನೊಂದಿಗೆ ರೋಹಿತ್ ಶರ್ಮಾ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

3 / 7
ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಆಟಗಾರನಾಗಿ ಇದುವರೆಗೆ ಯುವರಾಜ್ ಸಿಂಗ್ ಮಿಂಚಿದ್ದರು. ಯುವಿ ಬರೋಬ್ಬರಿ 33 ಸಿಕ್ಸ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಹಿಟ್​ಮ್ಯಾನ್ ಅಳಿಸಿ ಹಾಕಿದ್ದಾರೆ.

4 / 7
ನೆದರ್​ಲ್ಯಾಂಡ್ಸ್​ ವಿರುದ್ದ 3 ಸಿಕ್ಸ್​ ಸಿಡಿಸುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಹಿಟ್​ಮ್ಯಾನ್ ಇದುವರೆಗೆ 34 ಸಿಕ್ಸ್ ಸಿಡಿಸುವ ಮೂಲಕ ಈ ವಿಶೇಷ ದಾಖಲೆ ಬರೆದಿದ್ದಾರೆ.

5 / 7
ಇಲ್ಲಿ ಮತ್ತೊಂದು ವಿಶೇಷ ಎಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಆಗಿ ಕೂಡ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.

6 / 7
ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಟಿ20 ವಿಶ್ವಕಪ್​ನಲ್ಲಿ ಒಟ್ಟು 63 ಸಿಕ್ಸ್ ಸಿಡಿಸುವ ಮೂಲಕ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.

7 / 7
ಇದೀಗ 34 ಸಿಕ್ಸ್ ಬಾರಿಸುವ ಮೂಲಕ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದರೆ, 33 ಸಿಕ್ಸ್ ಸಿಡಿಸಿದ ಯುವರಾಜ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ.