IND vs USA: ಮೊದಲ ಎಸೆತದಲ್ಲೇ ವಿಕೆಟ್; ಎರಡೆರಡು ದಾಖಲೆ ಬರೆದ ಅರ್ಷ್‌ದೀಪ್..!
T20 World Cup 2024: ಅರ್ಷದೀಪ್ ಸಿಂಗ್ ಅಮೆರಿಕದ ಆರಂಭಿಕ ಆಟಗಾರ ಜಹಾಂಗೀರ್ ಅವರನ್ನು ಮೊದಲ ಎಸೆತದಲ್ಲಿಯೇ ಪೆವಿಲಿಯನ್ಗಟ್ಟಿದರು. ಈ ವಿಕೆಟ್‌ನೊಂದಿಗೆ ಅರ್ಷದೀಪ್ ಸಿಂಗ್ ಟಿ20 ಅಂತರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನೂ ನಿರ್ಮಿಸಿದರು.
1 / 7
2024 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರ ಪ್ರದರ್ಶನ ಅದ್ಭುತವಾಗಿದೆ. ಪಾಕಿಸ್ತಾನದ ವಿರುದ್ಧ ಅಮೋಘ ಬೌಲಿಂಗ್ ಮಾಡಿದ್ದ ಅರ್ಷದೀಪ್ ಅಮೆರಿಕ ವಿರುದ್ಧವೂ ಅಮೋಘ ಬೌಲಿಂಗ್ ಮಾಡಿದ್ದಾರೆ.
2 / 7
ಈ ಎಡಗೈ ವೇಗಿ ಅಮೆರಿಕದ ಆರಂಭಿಕ ಆಟಗಾರ ಜಹಾಂಗೀರ್ ಅವರನ್ನು ಮೊದಲ ಎಸೆತದಲ್ಲಿಯೇ ಪೆವಿಲಿಯನ್ಗಟ್ಟಿದರು. ಈ ವಿಕೆಟ್‌ನೊಂದಿಗೆ ಅರ್ಷದೀಪ್ ಸಿಂಗ್ ಟಿ20 ಅಂತರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನೂ ನಿರ್ಮಿಸಿದರು.
3 / 7
2022 ರ ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಕುಮಾರ್ ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ದರು. ಆದರೆ ಇದು ಪಂದ್ಯದ ಮೊದಲ ಎಸೆತವಾಗಿರಲಿಲ್ಲ. ಬದಲಿಗೆ ಅದು ಪಂದ್ಯದ ಎರಡನೇ ಇನ್ನಿಂಗ್ಸ್‌ನ ಮೊದಲ ಎಸೆತವಾಗಿತ್ತು.
4 / 7
ಅಮೆರಿಕ ವಿರುದ್ಧದ ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಅದೆನೆಂದರೆ ಟಿ20ಯಲ್ಲಿ ಪವರ್‌ಪ್ಲೇಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ಗಳ ಪಟ್ಟಿಯಲ್ಲಿ ಇದೀಗ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.
5 / 7
ಟಿ20 ಅಂತರಾಷ್ಟ್ರೀಯ ಪಂದ್ಯಗಳ ಪವರ್‌ಪ್ಲೇಯಲ್ಲಿ ಇದುವರೆಗೆ 28 ವಿಕೆಟ್ ಪಡೆದಿರುವ ಅರ್ಷದೀಪ್ ಸಿಂಗ್, 26 ವಿಕೆಟ್ ಪಡೆದಿರುವ ಜಸ್ಪ್ರೀತ್ ಬುಮ್ರಾರನ್ನು ಹಿಂದಿಕ್ಕಿದ್ದಾರೆ.
6 / 7
ಈ ವಿಷಯದಲ್ಲಿ ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ ಪವರ್‌ಪ್ಲೇನಲ್ಲಿ 47 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಈ ರೀತಿಯ ಪವರ್‌ಪ್ಲೇಯಲ್ಲಿ ವಿಕೆಟ್‌ಗಳನ್ನು ಪಡೆಯುವುದನ್ನು ಮುಂದುವರಿಸಿದರೆ, ಶೀಘ್ರದಲ್ಲೇ ಭುವನೇಶ್ವರ್ ದಾಖಲೆಯನ್ನೂ ಮುರಿಯಲ್ಲಿದ್ದಾರೆ.
7 / 7
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲು ಬ್ಯಾಟ್ ಮಾಡಿದ ಅಮೆರಿಕ ತಂಡ 8 ವಿಕೆಟ್ ಕಳೆದುಕೊಂಡು 110 ರನ್ ಕೆಲಹಾಕಿದೆ. ಟೀಂ ಇಂಡಿಯಾ ಪರ ಅರ್ಷ್‌ದೀಪ್ ಸಿಂಗ್ ಕೇವಲ 9 ರನ್ ನೀಡಿ 4 ವಿಕೆಟ್ ಕಬಳಿಸಿ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು.