- Kannada News Photo gallery Cricket photos T20 World Cup 2024 Host Teams not win trophy in t20 world cup history
T20 World Cup 2024: ಆತಿಥೇಯ ತಂಡಕ್ಕೆ ಟಿ20 ವಿಶ್ವಕಪ್ ಟ್ರೋಫಿ ಇನ್ನೂ ಗಗನ ಕುಸುಮ..!
T20 World Cup 2024: ವಾಸ್ತವವಾಗಿ ಇದುವರೆಗೆ ಒಟ್ಟು 8 ಆವೃತ್ತಿಯ ಟಿ20 ವಿಶ್ವಕಪ್ ಆಡಿದ್ದು, ಆತಿಥೇಯ ತಂಡಕ್ಕೆ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಭಾರತ 2016 ರಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆದರೆ ಆ ಆವೃತ್ತಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು ಪ್ರತಿ ಆವೃತ್ತಿಯ ಟಿ20 ವಿಶ್ವಕಪ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿದೆ ಮತ್ತು ಯಾವ ತಂಡ ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡುವುದಾದರೆ..
Updated on: Jun 24, 2024 | 4:19 PM

2024ರ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 2 ತಂಡಗಳು ಸೆಮಿಫೈನಲ್ ತಲುಪಿವೆ. ಉಳಿದೆರಡು ಸ್ಥಾನಕ್ಕಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೇರಿದಂತೆ 3 ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಟೂರ್ನಿಗೆ ಆತಿಥ್ಯ ವಹಿಸುತ್ತಿವೆ. ಎರಡೂ ಆತಿಥೇಯ ತಂಡಗಳು ಸೂಪರ್-8ರಿಂದ ಹೊರಬಿದ್ದಿವೆ. ಇದರೊಂದಿಗೆ ಈ ಆವೃತ್ತಿಯಲ್ಲೂ ಅದೊಂದು ದಾಖಲೆ ಸೃಷ್ಟಿಯಾಗದೆ ಹಾಗೆ ಉಳಿದಿದೆ.

ವಾಸ್ತವವಾಗಿ ಇದುವರೆಗೆ ಒಟ್ಟು 8 ಆವೃತ್ತಿಯ ಟಿ20 ವಿಶ್ವಕಪ್ ಆಡಿದ್ದು, ಆತಿಥೇಯ ತಂಡಕ್ಕೆ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಭಾರತ 2016 ರಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆದರೆ ಆ ಆವೃತ್ತಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು ಪ್ರತಿ ಆವೃತ್ತಿಯ ಟಿ20 ವಿಶ್ವಕಪ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿದೆ ಮತ್ತು ಯಾವ ತಂಡ ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡುವುದಾದರೆ..

2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜಿಸಲಾಗಿತ್ತು. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಈ ಆವೃತ್ತಿಯಲ್ಲಿ ಭಾರತ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ಈ ಮಾದರಿಯ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2009 ರ ಟಿ20 ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆದಿತ್ತು. ಇದರ ಫೈನಲ್ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಈ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತ್ತು.

2010 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್‌ನಲ್ಲಿ ನಡೆದಿತ್ತು. ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಮೊದಲ ಬಾರಿಗೆ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2012 ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಆಯೋಜಿಸಿತ್ತು. ಈ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಚಾಂಪಿಯನ್ ಆಯಿತು. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಶ್ರೀಲಂಕಾವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು ಮತ್ತು ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

Team India celebrate T20 World cup victory at Marine Drive & Wankhede on July 4th Cricket News In Kannada

2016ರ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಈ ಆವೃತ್ತಿಯ ಪ್ರಶಸ್ತಿಯನ್ನು ವೆಸ್ಟ್ ಇಂಡೀಸ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 4 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್, ಭಾರತ ಹಾಗೂ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತ್ತು.

2021 ರ ಟಿ20 ವಿಶ್ವಕಪ್ ಅನ್ನು ಯುಎಇ ಮತ್ತು ಒಮಾನ್ ಜಂಟಿಯಾಗಿ ಆಯೋಜಿಸಿದ್ದವು. ಈ ಆವೃತ್ತಿಯ ಪ್ರಶಸ್ತಿಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತು. ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2022 ರ ಟಿ20 ವರ್ಲ್ಡ್ ಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಫೈನಲ್ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಈ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು.



















