- Kannada News Photo gallery Cricket photos T20 World Cup 2024 IND vs ENG virat kohli poor form continues in semifinal match vs england
IND vs ENG: ಸೆಮಿಫೈನಲ್ ಪಂದ್ಯದಲ್ಲೂ ಒಂದಂಕಿಗೆ ಸುಸ್ತಾದ ವಿರಾಟ್ ಕೊಹ್ಲಿ
Virat Kohli, T20 World Cup 2024: ಈ ಬಾರಿಯ ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಾದರೂ ತಮ್ಮ ಬ್ಯಾಟಿಂಗ್ ಖದರ್ ತೋರಿಸುತ್ತಾರೆ ಎಂದು ನಿರೀಕ್ಷಿಸಿದ್ದರು. ಇದಕ್ಕೆ ಪೂರಕವಾಗಿ ಈ ಹಿಂದೆ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಕನಿಷ್ಠ ಪಕ್ಷ ಅರ್ಧಶತಕದ ಇನ್ನಿಂಗ್ಸ್ ಆಡಿತ್ತು.ಆದರೆ ಈ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ, ಕೇವಲ 9 ರನ್ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.
Updated on: Jun 27, 2024 | 10:19 PM

2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಗಯಾನಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್‌ಗೆ ಇಳಿದಿದೆ. ಆದರೆ ನಿರೀಕ್ಷೆಯಂತೆ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದೆ.

ಮಳೆ ಬಂದು ಪಂದ್ಯ ನಿಲ್ಲುವ ವೇಳೆಗೆ ಟೀಂ ಇಂಡಿಯಾ ಮೊದಲ 8 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 65 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇದ್ದರೆ, 2 ವಿಕೆಟ್ಗಳ ರೂಪದಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಾದರೂ ತಮ್ಮ ಬ್ಯಾಟಿಂಗ್ ಖದರ್ ತೋರಿಸುತ್ತಾರೆ ಎಂದು ನಿರೀಕ್ಷಿಸಿದ್ದರು. ಇದಕ್ಕೆ ಪೂರಕವಾಗಿ ಈ ಹಿಂದೆ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಕನಿಷ್ಠ ಪಕ್ಷ ಅರ್ಧಶತಕದ ಇನ್ನಿಂಗ್ಸ್ ಆಡಿತ್ತು.

ಆದರೆ ಈ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ, ಕೇವಲ 9 ರನ್ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನಿಂಗ್ಸ್ ಆರಂಭಿಸಿದಾಗಿನಿಂದಲೂ ರನ್ಗಾಗಿ ತಿಣುಕಾಡುತ್ತಿದ್ದ ಕೊಹ್ಲಿ, ಒಂದೇ ಒಂದು ಸಿಕ್ಸರ್ ಸಿಡಿಸಿ, ಕ್ಲೀನ್ ಬೌಲ್ಡ್ ಆದರು.

ಮೇಲೆ ಹೇಳಿದಂತೆ ಟಿ20 ವಿಶ್ವಕಪ್‌ನ ನಾಕೌಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸದೆ ಔಟಾಗಿರುವುದು ಇದೇ ಮೊದಲು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನ 4 ನಾಕೌಟ್ ಪಂದ್ಯಗಳನ್ನು ಆಡಿದ್ದರು. ಈ ಎಲ್ಲಾ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದ ಅರ್ಧಶತಕಗಳು ಸಿಡಿದಿದ್ದವು. ಆದರೆ ಈ ಬಾರಿ ವಿರಾಟ್ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

ಮೊದಲಿಗೆ 2014 ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 72 ರನ್ ಬಾರಿಸಿದ್ದ ವಿರಾಟ್, ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 77 ರನ್ ಬಾರಿಸಿದ್ದರು. ಆ ಬಳಿಕ 2016 ರ ವಿಶ್ವಕಪ್‌ನಲ್ಲಿ ವಿಂಡೀಸ್ ವಿರುದ್ಧ ಅಜೇಯ 89 ರನ್ ಬಾರಿಸಿದ್ದ ವಿರಾಟ್, 2022 ರಲ್ಲಿ ಇದೇ ಇಂಗ್ಲೆಂಡ್ ವಿರುದ್ಧ 50 ರನ್ ಬಾರಿಸಿದ್ದರು.

ಇನ್ನು ಈ ಆವೃತ್ತಿಯಲ್ಲಿ ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಆಡಿರುವ 7 ಪಂದ್ಯಗಳಲ್ಲಿ ಕೇವಲ 75 ರನ್ ಮಾತ್ರ ಬಾರಿಸಿದ್ದಾರೆ. ಐರ್ಲೆಂಡ್ ವಿರುದ್ಧ 1 ರನ್ ಬಾರಿಸಿದ್ದ ವಿರಾಟ್, ಪಾಕಿಸ್ತಾನ ವಿರುದ್ಧ 4 ರನ್, ಯುಎಸ್ಎ ವಿರುದ್ಧ 0, ಅಫ್ಘಾನಿಸ್ತಾನ ವಿರುದ್ಧ 24 ರನ್, ಬಾಂಗ್ಲಾದೇಶ ವಿರುದ್ಧ 37 ರನ್, ಆಸ್ಟ್ರೇಲಿಯಾ ವಿರುದ್ಧ 0 ರನ್, ಇಂಗ್ಲೆಂಡ್ ವಿರುದ್ಧ 9 ರನ್ ಬಾರಿಸಿದ್ದಾರೆ.



















