T20 World Cup 2024: ಭಾರತ- ಅಫ್ಘಾನ್ ಕೊನೆಯ ಮುಖಾಮುಖಿಯ ಫಲಿತಾಂಶ ಏನಾಗಿತ್ತು?

IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಕೊನೆಯ ಟಿ20 ಪಂದ್ಯ ಈ ವರ್ಷದ ಜನವರಿಯಲ್ಲಿ ನಡೆದಿತ್ತು. ಸೂಪರ್ ಓವರ್​ನಲ್ಲಿ ಇತ್ಯರ್ಥಗೊಂಡ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ 11 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಅಫ್ಘಾನಿಸ್ತಾನ ಕೇವಲ 1 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ ಈ ಪಂದ್ಯವನ್ನು ಭಾರತ ಸೂಪರ್ ಓವರ್‌ನಲ್ಲಿ 10 ರನ್‌ಗಳಿಂದ ಗೆದ್ದುಕೊಂಡಿತು.

ಪೃಥ್ವಿಶಂಕರ
|

Updated on: Jun 20, 2024 | 4:46 PM

9ನೇ ಆವೃತ್ತಿಯ ಟಿ20 ವಿಶ್ವಕಪ್್​ನ ಸೂಪರ್-8 ಸುತ್ತು ನಿನ್ನೆಯಿಂದ ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಇಂದು ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ) ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಈ ಚುಟುಕು ಮಾದರಿಯಲ್ಲಿ ಉಭಯ ತಂಡಗಳ ಮುಖಾಮುಖಿ ವರದಿ ತಿಳಿದುಕೊಳ್ಳುವುದು ಅವಶ್ಯಕವಾಗಿದೆ.

1 / 8
ವಾಸ್ತವವಾಗಿ ಭಾರತ ತಂಡವು ಟಿ20 ಪಂದ್ಯಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಇದುವರೆಗೆ ಸೋತಿಲ್ಲ. ಆದರೆ ಅಫ್ಘಾನಿಸ್ತಾನ ತಂಡವು ಖಂಡಿತವಾಗಿಯೂ ಭಾರತ ತಂಡಕ್ಕೆ ಇತ್ತೀಚಿನ ದಿನಗಳಲ್ಲಿ ಕಠಿಣ ಸವಾಲು ನೀಡುತ್ತ ಬಂದಿದೆ. ಇದಕ್ಕೆ ಪೂರಕವಾಗಿ ಈ ಎರಡೂ ತಂಡಗಳ ನಡುವೆ ನಡೆದ ಕೊನೆಯ ಪಂದ್ಯ ಕೂಡ ಸಾಕ್ಷಿಯಾಗಿದೆ.

2 / 8
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಕೊನೆಯ ಟಿ20 ಪಂದ್ಯ ಈ ವರ್ಷದ ಜನವರಿಯಲ್ಲಿ ನಡೆದಿತ್ತು. ಉಭಯ ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿತ್ತು. ಸರಣಿಯ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು.

3 / 8
ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿತ್ತು. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 212 ರನ್ ಗಳಿಸಿತು. ಉತ್ತರವಾಗಿ ಅಫ್ಘಾನಿಸ್ತಾನ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 212 ರನ್‌ ಗಳಿಸಿತು. ಇದಾದ ಬಳಿಕ ಸೂಪರ್ ಓವರ್ ಆಡಲಾಯಿತು.

4 / 8
ಸೂಪರ್ ಓವರ್‌ನಲ್ಲಿ ಭಾರತ 11 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಅಫ್ಘಾನಿಸ್ತಾನ ಕೇವಲ 1 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಭಾರತ ಸೂಪರ್ ಓವರ್‌ನಲ್ಲಿ 10 ರನ್‌ಗಳಿಂದ ಗೆದ್ದುಕೊಂಡಿತು.

5 / 8
ಈ ಪಂದ್ಯದಲ್ಲಿ, ನಾಯಕ ರೋಹಿತ್ ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್ ಆಗಿ 69 ಎಸೆತಗಳಲ್ಲಿ 121 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ರೋಹಿತ್ ಶರ್ಮಾ ಕೂಡ ಸೂಪರ್ ಓವರ್‌ನಲ್ಲಿ 3 ಎಸೆತಗಳಲ್ಲಿ 11 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

6 / 8
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹೊರತುಪಡಿಸಿ, ರಿಂಕು ಸಿಂಗ್ 39 ಎಸೆತಗಳಲ್ಲಿ 69 ರನ್ ಗಳಿಸಿ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆದರೆ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 0 ರನ್ ಗಳಿಸಿ ಔಟಾದರೆ, ಶಿವಂ ದುಬೆ 1 ರನ್ ಗಳಿಸಿ ಔಟಾದರು. ಬೌಲಿಂಗ್​ನಲ್ಲಿ ವಾಷಿಂಗ್ಟನ್ ಸುಂದರ್ 3 ವಿಕೆಟ್ ಮತ್ತು ಕುಲ್ದೀಪ್ ಯಾದವ್ 1 ವಿಕೆಟ್ ಪಡೆದಿದ್ದರು.

7 / 8
ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಆಟಗಾರರು ಕೂಡ ಭಾರತ ತಂಡಕ್ಕೆ ಕಠಿಣ ಸವಾಲು ನೀಡಿದ್ದರು. ತಂಡದ ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಜದ್ರಾನ್ ತಲಾ 50 ರನ್ ಬಾರಿಸಿದ್ದರು. ಇದರ ನಂತರ ಗುಲಾಬ್ದಿನ್ ನೈಬ್ ಅಜೇಯ 55 ರನ್ ಮತ್ತು ಮೊಹಮ್ಮದ್ ನಬಿ 16 ಎಸೆತಗಳಲ್ಲಿ 34 ರನ್ ಗಳಿಸಿ ತಂಡವನ್ನು 212 ರನ್‌ಗಳ ಸ್ಕೋರ್‌ಗೆ ಕೊಂಡೊಯ್ದರು. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ನಾಯಕ ರಶೀದ್ ಖಾನ್ ಆಡಿರಲಿಲ್ಲ.

8 / 8
Follow us
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ

ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ

ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ

ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ

ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!

Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ

ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!