- Kannada News Photo gallery Cricket photos T20 World Cup 2024 India vs Ireland Head To Head record in t20i
IND vs IRE: ಟಿ20ಯಲ್ಲಿ ಭಾರತ- ಐರ್ಲೆಂಡ್ ಮುಖಾಮುಖಿ ದಾಖಲೆ ಹೇಗಿದೆ?
IND vs IRE: ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನಾವು ನೋಡುವುದಾದರೆ, ಟೀಮ್ ಇಂಡಿಯಾ ಸಂಪೂರ್ಣವಾಗಿ ಪ್ರಾಬಲ್ಯ ಹೊಂದಿದೆ. ಐರ್ಲೆಂಡ್‌ಗೆ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ.
Updated on: Jun 03, 2024 | 10:29 PM

ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 5 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನೋಡಿದರೆ, ರೋಹಿತ್ ಪಡೆ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ.

ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನಾವು ನೋಡುವುದಾದರೆ, ಟೀಮ್ ಇಂಡಿಯಾ ಸಂಪೂರ್ಣವಾಗಿ ಪ್ರಾಬಲ್ಯ ಹೊಂದಿದೆ. ಐರ್ಲೆಂಡ್‌ಗೆ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ.

ಎರಡು ತಂಡಗಳ ನಡುವೆ ಜೂನ್ 10, 2009 ರಂದು ಮೊದಲ ಪಂದ್ಯ ನಡೆದಿತ್ತು. ಅಂದಿನಿಂದ ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಇದುವರೆಗೆ 7 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಈ ಏಳೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಅಂದರೆ ಐರ್ಲೆಂಡ್‌ಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.



















