- Kannada News Photo gallery Cricket photos T20 World Cup 2024: Irfan Pathan Names His 15-Man India Squad
T20 World Cup 2024: ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಹೆಸರಿಸಿದ ಇರ್ಫಾನ್ ಪಠಾಣ್
T20 World Cup 2024: ಈ ಬಾರಿಯ ಐಪಿಎಲ್ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅಂದರೆ ಐಪಿಎಲ್ 2024ರ ಫೈನಲ್ ಪಂದ್ಯವು ಮೇ 26 ರಂದು ನಡೆದರೆ, ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ಯುಎಸ್ಎ - ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ.
Updated on: Apr 25, 2024 | 11:30 AM

ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಸಿದ್ಧತೆಗಳು ಆರಂಭವಾಗಿದೆ. ಈಗಾಗಲೇ ಎಲ್ಲಾ ಕ್ರಿಕೆಟ್ ಮಂಡಳಿಗೆ ಮೇ 1 ರೊಳಗೆ 15 ಸದಸ್ಯರ ತಂಡಗಳನ್ನು ಘೋಷಿಸಬೇಕೆಂದು ಐಸಿಸಿ ಸೂಚಿಸಿದೆ. ಇದರ ಬೆನ್ನಲ್ಲೇ ಇತ್ತ ಟೀಮ್ ಇಂಡಿಯಾ ಆಯ್ಕೆ ಕುರಿತು ಕೂಡ ಚರ್ಚೆಗಳು ಶುರುವಾಗಿದೆ.

ಈ ಚರ್ಚೆಗಳ ನಡುವೆ ಭಾರತ ತಂಡದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ 15 ಸದಸ್ಯರ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ್ದಾರೆ. ಪಠಾಣ್ ಹೆಸರಿಸಿದ ಈ ತಂಡದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ರಾಜಸ್ಥಾನ್ ರಾಯಲ್ಸ್ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ.

ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಬೇಕು. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡುವುದು ಸೂಕ್ತ. ಹಾಗೆಯೇ ಶುಭ್ಮನ್ ಗಿಲ್ ಅವರನ್ನು ಹೆಚ್ಚುವರಿ ಆರಂಭಿನಾಗಿ ತಂಡದಲ್ಲಿರಿಸಿಕೊಳ್ಳಬೇಕೆಂದು ಪಠಾಣ್ ತಿಳಿಸಿದ್ದಾರೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್ ಹಾಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ರವೀಂದ್ರ ಜಡೇಜಾ ಅವರಿಗೆ ಸ್ಥಾನ ನೀಡಿದ್ದಾರೆ.

ಅದೇ ರೀತಿ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಿದರೆ, ಸ್ಪಿನ್ನರ್ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಇರ್ಫಾನ್ ಪಠಾಣ್ ಅವರ ಟಿ20 ವಿಶ್ವಕಪ್ಗಾಗಿ ಭಾರತ ತಂಡ ಈ ಕೆಳಗಿನಂತಿದೆ...

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಶುಭ್ಮನ್ ಗಿಲ್.
