T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಹೆಸರಿಸಿದ ಇರ್ಫಾನ್ ಪಠಾಣ್

| Updated By: ಝಾಹಿರ್ ಯೂಸುಫ್

Updated on: Apr 25, 2024 | 11:30 AM

T20 World Cup 2024: ಈ ಬಾರಿಯ ಐಪಿಎಲ್ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅಂದರೆ ಐಪಿಎಲ್ 2024ರ ಫೈನಲ್ ಪಂದ್ಯವು ಮೇ 26 ರಂದು ನಡೆದರೆ, ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ಯುಎಸ್​ಎ - ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ.

1 / 6
ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಸಿದ್ಧತೆಗಳು ಆರಂಭವಾಗಿದೆ. ಈಗಾಗಲೇ ಎಲ್ಲಾ ಕ್ರಿಕೆಟ್ ಮಂಡಳಿಗೆ ಮೇ 1 ರೊಳಗೆ 15 ಸದಸ್ಯರ ತಂಡಗಳನ್ನು ಘೋಷಿಸಬೇಕೆಂದು ಐಸಿಸಿ ಸೂಚಿಸಿದೆ. ಇದರ ಬೆನ್ನಲ್ಲೇ ಇತ್ತ ಟೀಮ್ ಇಂಡಿಯಾ ಆಯ್ಕೆ ಕುರಿತು ಕೂಡ ಚರ್ಚೆಗಳು ಶುರುವಾಗಿದೆ.

2 / 6
ಈ ಚರ್ಚೆಗಳ ನಡುವೆ ಭಾರತ ತಂಡದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ 15 ಸದಸ್ಯರ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ್ದಾರೆ. ಪಠಾಣ್ ಹೆಸರಿಸಿದ ಈ ತಂಡದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ರಾಜಸ್ಥಾನ್ ರಾಯಲ್ಸ್ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ.

3 / 6
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಬೇಕು. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡುವುದು ಸೂಕ್ತ. ಹಾಗೆಯೇ ಶುಭ್​ಮನ್ ಗಿಲ್ ಅವರನ್ನು ಹೆಚ್ಚುವರಿ ಆರಂಭಿನಾಗಿ ತಂಡದಲ್ಲಿರಿಸಿಕೊಳ್ಳಬೇಕೆಂದು ಪಠಾಣ್ ತಿಳಿಸಿದ್ದಾರೆ.

4 / 6
ಇನ್ನು ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್ ಹಾಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ರವೀಂದ್ರ ಜಡೇಜಾ ಅವರಿಗೆ ಸ್ಥಾನ ನೀಡಿದ್ದಾರೆ.

5 / 6
ಅದೇ ರೀತಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಿದರೆ, ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಇರ್ಫಾನ್ ಪಠಾಣ್ ಅವರ ಟಿ20 ವಿಶ್ವಕಪ್​ಗಾಗಿ ಭಾರತ ತಂಡ ಈ ಕೆಳಗಿನಂತಿದೆ...

6 / 6
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಶುಭ್​ಮನ್ ಗಿಲ್.