ಇತ್ತ ಮಳೆಯಿಂದಾಗಿ ಪಂದ್ಯ ರದ್ದಾದರೆ ಅದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್. ಏಕೆಂದರೆ ಸೆಮಿಫೈನಲ್ ಪಂದ್ಯ ರದ್ದಾದರೆ, ಸೂಪರ್-8 ಸುತ್ತಿನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡ ಫೈನಲ್ಗೆ ಪ್ರವೇಶಿಸಲಿದೆ. ಇಲ್ಲಿ ಭಾರತ ತಂಡವು ಗ್ರೂಪ್-1 ರಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಗ್ರೂಪ್-2 ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸುವುದು ಖಚಿತ.