AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಪಾಕಿಸ್ತಾನ್ ವಿರುದ್ಧ ಸ್ಪೋಟಕ ಅರ್ಧಶತಕ ಸಿಡಿಸಿ ದಾಖಲೆ ಬರೆದ ಆರೋನ್ ಜಾನ್ಸನ್

Pakistan vs Canada: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕೆನಡಾ ತಂಡದ ಆರಂಭಿಕ ಬ್ಯಾಟ್ಸ್​ಮನ್ ಆರೋನ್ ಜಾನ್ಸನ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದು ನಸ್ಸೌ ಸ್ಟೇಡಿಯಂನಲ್ಲಿ ಆಡಲಾದ ಪಂದ್ಯಗಳಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಮೂಡಿಬಂದ ಮೊದಲ ಅರ್ಧಶತಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jun 11, 2024 | 9:59 PM

Share
T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಕೆನಡಾ ಬ್ಯಾಟರ್ ಆರೋನ್ ಜಾನ್ಸನ್ (Aaron Johnson) ವಿಶೇಷ ದಾಖಲೆ ಬರೆದಿದ್ದಾರೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಕೆನಡಾ ತಂಡಕ್ಕೆ ಆರಂಭಿಕ ಆಟಗಾರ ಆರೋನ್ ಜಾನ್ಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಜಾನ್ಸನ್ ಪಾಕ್ ಬೌಲರ್​ಗಳ ಬೆಂಡೆತ್ತಿದರು.

2 / 6
ಆದರೆ ಮತ್ತೊಂದು ಬದಿಯಲ್ಲಿ ಜಾನ್ಸನ್​ಗೆ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಒಂದೆಡೆ ಜಾನ್ಸನ್ ರನ್​ಗಳಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು. ಇದರಿಂದಾಗಿ ಪವರ್​ಪ್ಲೇ ಬಳಿಕ ಆರೋನ್ ಜಾನ್ಸನ್ ರಕ್ಷಣಾತ್ಮಕ ಆಟಕ್ಕೆ ಮುಂದಾಗಬೇಕಾಯಿತು.

3 / 6
ಇದಾಗ್ಯೂ 38 ಎಸೆತಗಳಲ್ಲಿ ಅರ್ಧಶತಕ ಪೂರೈಸುವಲ್ಲಿ ಆರೋನ್ ಜಾನ್ಸನ್ ಯಶಸ್ವಿಯಾದರು. ಅಲ್ಲದೆ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಬಾರಿಸಿ ನಸೀಮ್ ಶಾ ಎಸೆತದಲ್ಲಿ ಬೌಲ್ಡ್ ಆದರು.

4 / 6
ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆನಡಾ ಪರ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಆರೋನ್ ಜಾನ್ಸನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನವನೀತ್ ಧಲಿವಾಲ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಆರೋನ್ ಜಾನ್ಸನ್ ಕೆನಡಾ ಪರ ಹೊಸ ಇತಿಹಾಸ ಬರೆದಿದ್ದಾರೆ.

5 / 6
ಇನ್ನು ಆರೋನ್ ಜಾನ್ಸನ್ ಅವರ ಈ ಅರ್ಧಶತಕದ ನೆರವಿನಿಂದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿದೆ. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ 107 ರನ್​ಗಳ ಗುರಿ ನೀಡಿದೆ.

6 / 6
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ

ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು

ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!

ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ

ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ

ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ