Aaron Jones: ಆರೋನ್ ಅಬ್ಬರಕ್ಕೆ ಯುವರಾಜ್ ಸಿಂಗ್ ದಾಖಲೆ ಧೂಳೀಪಟ

|

Updated on: Jun 04, 2024 | 12:53 PM

T20 World Cup 2024: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲೇ 10 ಸಿಕ್ಸ್ ಸಿಡಿಸುವ ಮೂಲಕ ಅಮೆರಿಕನ್ ಬ್ಯಾಟರ್ ಆರೋನ್ ಜೋನ್ಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
T20 World Cup 2024: ಟಿ20 ವಿಶ್ವಕಪ್ 2024ರ ಮೊದಲ ಪಂದ್ಯದಲ್ಲೇ ಅಬ್ಬರಿಸುವ ಮೂಲಕ ಅಮೆರಿಕ ಬ್ಯಾಟರ್ ಆರೋನ್ ಜೋನ್ಸ್ (Aaron Jones) ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳಲ್ಲಿ ಒಂದು ದಾಖಲೆ ನಿರ್ಮಾಣವಾಗಿರುವುದು ಯುವರಾಜ್ ಸಿಂಗ್ ಅವರ ಅಪರೂಪದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಕನಿಷ್ಠ 30 ಎಸೆತಗಳನ್ನು ಎದುರಿಸಿ ಅತ್ಯುತ್ತಮ ಸ್ಟ್ರೈಕ್ ರೇಟ್​ನಲ್ಲಿ ರನ್ ಕಲೆಹಾಕಿದ ವಿಶ್ವ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಸಿಕ್ಸರ್ ಸಿಂಗ್ ಈ ಸಾಧನೆ ಮಾಡಿದ್ದರು.

3 / 6
ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರಿಸಿದ ಯುವರಾಜ್ ಸಿಂಗ್ 30 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 70 ರನ್ ಚಚ್ಚಿದ್ದರು. ಅದು ಕೂಡ 233.33 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಯುವಿ ಅತ್ಯುತ್ತಮ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ವಿಶೇಷ ದಾಖಲೆ ಬರೆದಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆರೋನ್ ಜೋನ್ಸ್ ಯಶಸ್ವಿಯಾಗಿದ್ದಾರೆ. ಕೆನಡಾ ವಿರುದ್ಧದ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಆರೋನ್ 10 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 94 ರನ್​ ಬಾರಿಸಿದ್ದಾರೆ. ಈ ಮೂಲಕ 235.00 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 6
ಹಾಗೆಯೇ ಈ ಪಂದ್ಯದಲ್ಲಿ ಬಾರಿಸಿದ 10 ಸಿಕ್ಸ್​ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಆರೋನ್ ಜೋನ್ಸ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ ಹೆಸರಿನಲ್ಲಿತ್ತು. ರೊಸ್ಸೊವ್ 2007 ರ ಟಿ20 ವಿಶ್ವಕಪ್​ನಲ್ಲಿ 8 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕೂಡ ಮುರಿದು ಆರೋನ್ ಜೋನ್ಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Published On - 10:08 am, Mon, 3 June 24