Aaron Jones: ಆರೋನ್ ಜೋನ್ಸ್ ತೂಫಾನ್​ಗೆ ಹಳೆಯ ವಿಶ್ವ ದಾಖಲೆಗಳು ಉಡೀಸ್

T20 World Cup 2024: ಟಿ20 ವಿಶ್ವಕಪ್​ನ ಉದ್ಘಾಟನಾ ಪಂದ್ಯದಲ್ಲಿ ಯುಎಸ್​ಎ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 17.4 ಓವರ್​ಗಳಲ್ಲಿ 197 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

|

Updated on: Jun 02, 2024 | 11:07 AM

T20 World Cup 2024: ಟಿ20 ವಿಶ್ವಕಪ್ 2024ರ ಮೊದಲ ಪಂದ್ಯದಲ್ಲೇ ಸಿಕ್ಸ್​ಗಳ ಸುರಿಮಳೆಯಾಗಿದೆ. ಅದರಲ್ಲೂ ಯುಎಸ್​ಎ ತಂಡದ ಬ್ಯಾಟರ್ ಆರೋನ್ ಜೋನ್ಸ್ (Aaron Jones) ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ.

1 / 7
ಡಲ್ಲಾಸ್​ನಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್​ ಕಲೆಹಾಕಿತು.

2 / 7
195 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಯುಎಸ್​ಎ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರೋನ್ ಜೋನ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಆರೋನ್ ಸಿಕ್ಸ್ - ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 40 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಸಿಡಿಸಿದರು.

3 / 7
ಈ ಹತ್ತು ಸಿಕ್ಸ್​ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಸಿಡಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಆರೋನ್ ಜೋನ್ಸ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ ಹೆಸರಿನಲ್ಲಿತ್ತು. 2007 ರ ಟಿ20 ವಿಶ್ವಕಪ್​ನಲ್ಲಿ ರೊಸ್ಸೊವ್ 8 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಆರೋನ್ ಜೋನ್ಸ್ ಈ ದಾಖಲೆ ಮುರಿದಿದ್ದಾರೆ.

4 / 7
ಇದಲ್ಲದೆ ಟಿ20 ವಿಶ್ವಕಪ್​ನ ಉದ್ಘಾಟನಾ ಪಂದ್ಯದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. 2007ರ ಟಿ20 ವಿಶ್ವಕಪ್​ನ ಉದ್ಘಾಟನಾ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಕ್ರಿಸ್ ಗೇಲ್ 57 ಎಸೆತಗಳಲ್ಲಿ 10 ಸಿಕ್ಸ್​ ಬಾರಿಸಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದರು.

5 / 7
ಇದೀಗ ಕೆನಡಾ ವಿರುದ್ಧ 10 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಆರೋನ್ ಜೋನ್ಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (100) ಅಗ್ರಸ್ಥಾನದಲ್ಲಿದ್ದು, ಇದೀಗ 94 ರನ್ ಬಾರಿಸಿರುವ ಜೋನ್ಸ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

6 / 7
ಇನ್ನು ಟಿ20 ವಿಶ್ವಕಪ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಐಸಿಸಿ ಅಸೋಸಿಯೇಟ್ ದೇಶದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಜೋನ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್​ನಲ್ಲಿ ಯುಎಸ್​ಎ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಕೂಡ ಆರೋನ್ ಜೋನ್ (22 ಎಸೆತಗಳು) ಪಾಲಾಗಿದೆ.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್