Aaron Jones: ಆರೋನ್ ಜೋನ್ಸ್ ತೂಫಾನ್ಗೆ ಹಳೆಯ ವಿಶ್ವ ದಾಖಲೆಗಳು ಉಡೀಸ್
T20 World Cup 2024: ಟಿ20 ವಿಶ್ವಕಪ್ನ ಉದ್ಘಾಟನಾ ಪಂದ್ಯದಲ್ಲಿ ಯುಎಸ್ಎ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 17.4 ಓವರ್ಗಳಲ್ಲಿ 197 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
1 / 7
T20 World Cup 2024: ಟಿ20 ವಿಶ್ವಕಪ್ 2024ರ ಮೊದಲ ಪಂದ್ಯದಲ್ಲೇ ಸಿಕ್ಸ್ಗಳ ಸುರಿಮಳೆಯಾಗಿದೆ. ಅದರಲ್ಲೂ ಯುಎಸ್ಎ ತಂಡದ ಬ್ಯಾಟರ್ ಆರೋನ್ ಜೋನ್ಸ್ (Aaron Jones) ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ.
2 / 7
ಡಲ್ಲಾಸ್ನಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು.
3 / 7
195 ರನ್ಗಳ ಕಠಿಣ ಗುರಿ ಬೆನ್ನತ್ತಿದ ಯುಎಸ್ಎ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರೋನ್ ಜೋನ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಆರೋನ್ ಸಿಕ್ಸ್ - ಫೋರ್ಗಳ ಸುರಿಮಳೆಗೈದರು. ಈ ಮೂಲಕ ಕೇವಲ 40 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಸಿಡಿಸಿದರು.
4 / 7
ಈ ಹತ್ತು ಸಿಕ್ಸ್ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಸಿಡಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಆರೋನ್ ಜೋನ್ಸ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ ಹೆಸರಿನಲ್ಲಿತ್ತು. 2007 ರ ಟಿ20 ವಿಶ್ವಕಪ್ನಲ್ಲಿ ರೊಸ್ಸೊವ್ 8 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಆರೋನ್ ಜೋನ್ಸ್ ಈ ದಾಖಲೆ ಮುರಿದಿದ್ದಾರೆ.
5 / 7
ಇದಲ್ಲದೆ ಟಿ20 ವಿಶ್ವಕಪ್ನ ಉದ್ಘಾಟನಾ ಪಂದ್ಯದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. 2007ರ ಟಿ20 ವಿಶ್ವಕಪ್ನ ಉದ್ಘಾಟನಾ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಕ್ರಿಸ್ ಗೇಲ್ 57 ಎಸೆತಗಳಲ್ಲಿ 10 ಸಿಕ್ಸ್ ಬಾರಿಸಿ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು.
6 / 7
ಇದೀಗ ಕೆನಡಾ ವಿರುದ್ಧ 10 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಆರೋನ್ ಜೋನ್ಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (100) ಅಗ್ರಸ್ಥಾನದಲ್ಲಿದ್ದು, ಇದೀಗ 94 ರನ್ ಬಾರಿಸಿರುವ ಜೋನ್ಸ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
7 / 7
ಇನ್ನು ಟಿ20 ವಿಶ್ವಕಪ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಐಸಿಸಿ ಅಸೋಸಿಯೇಟ್ ದೇಶದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಜೋನ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ನಲ್ಲಿ ಯುಎಸ್ಎ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಕೂಡ ಆರೋನ್ ಜೋನ್ (22 ಎಸೆತಗಳು) ಪಾಲಾಗಿದೆ.