AFG vs AUS: ಆಸ್ಟ್ರೇಲಿಯಾದ ವಿಶ್ವ ದಾಖಲೆಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಅಫ್ಘಾನಿಸ್ತಾನ್

|

Updated on: Jun 23, 2024 | 11:53 AM

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸತತ ಗೆಲುವುಗಳ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದ ಆಸ್ಟ್ರೇಲಿಯಾ ತಂಡದ ಗೆಲುವಿನ ನಾಗಾಲೋಟಕ್ಕೆ ಕೊನೆಗೂ ಅಫ್ಘಾನಿಸ್ತಾನ್ ಬ್ರೇಕ್ ಹಾಕಿದೆ. ಅದು ಕೂಡ ಆಸೀಸ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 6
T20 World Cup 2024: ಟಿ20 ವಿಶ್ವಕಪ್​ನಲ್ಲಿ ಸತತ ಗೆಲುವುಗಳ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದ ಆಸ್ಟ್ರೇಲಿಯಾ ತಂಡದ ಗೆಲುವಿನ ನಾಗಾಲೋಟಕ್ಕೆ ಅಫ್ಘಾನಿಸ್ತಾನ್ (Afghanistan) ತಂಡ ಬ್ರೇಕ್ ಹಾಕಿದೆ. ಕಿಂಗ್ಸ್​ಟೌನ್​ನಲ್ಲಿ ನಡೆದ ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿದೆ.

2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 148 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 19.2 ಓವರ್​ಗಳಲ್ಲಿ 127 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಆಫ್ಘಾನಿಸ್ತಾನ್ 21 ರನ್​ಗಳ ಜಯ ಸಾಧಿಸಿದೆ.

3 / 6
ಈ ಸೋಲಿನೊಂದಿಗೆ ಟಿ20 ವಿಶ್ವಕಪ್​ನಲ್ಲಿ ಸತತ ಗೆಲುವುಗಳ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಅಂತ್ಯವಾದಂತಾಗಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದನ್ನು ಆಸ್ಟ್ರೇಲಿಯಾ ನಿರ್ಮಿಸಿತ್ತು.

4 / 6
ಭಾರತ ತಂಡವು 2012-2014 ರ ಟಿ20 ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್​ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು.

5 / 6
ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿತ್ತು. 2022 - 2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಸತತ 8 ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಸತತ ಜಯ ಸಾಧಿಸಿದ ತಂಡ ಎನಿಸಿಕೊಂಡಿತ್ತು.

6 / 6
ಇದೀಗ ಆಸ್ಟ್ರೇಲಿಯಾ ತಂಡದ 9ನೇ ಗೆಲುವಿಗೆ ಅಫ್ಘಾನಿಸ್ತಾನ್ ತಂಡ ಅಡ್ಡಗಾಲಾಕಿದೆ. ಅಲ್ಲದೆ ಬಲಿಷ್ಠ ಆಸೀಸ್ ಪಡೆಯನ್ನು 21 ರನ್​ಗಳಿಂದ ಮಣಿಸಿ ವಿಶ್ವ ದಾಖಲೆಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದೆ.